ಸಿನಿಮಾ ಸುದ್ದಿ

ಕ್ಯಾನ್ಸರ್ ಪೀಡಿತ ಪುಟ್ಟ ಬಾಲಕನ ಆಸೆ ಈಡೇರಿಸಿದ ನಟ ರಾಮ್ ಚರಣ್, ಹೃದಯ ವೈಶಾಲ್ಯತೆಗೆ ಅಭಿಮಾನಿಗಳು ಫಿದಾ!

Nagaraja AB

ಹೈದರಾಬಾದ್: ಖ್ಯಾತ ತೆಲುಗು ನಟ ರಾಮ್ ಚರಣ್ ಕ್ಯಾನ್ಸರ್ ಪೀಡಿತ 9 ವರ್ಷದ ಬಾಲಕ ಆಸೆಯನ್ನು ಈಡೇರಿಸಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಬಾಲಕ ಮಣಿ ಕುಶಾಲ್ ಗೆ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿಯಾಗಿದ್ದು, ತನ್ನ ನೆಚ್ಚಿನ ನಟನನ್ನು ಭೇಟಿಯಾಗುವ ಆಸೆ ಇತ್ತು. 

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಆಸ್ಪತ್ರೆಗೆ ಭೇಟಿ ನೀಡಿ ಪುಟ್ಟ ಅಭಿಯಾನಿಯ ಆರೋಗ್ಯ ವಿಚಾರಿಸಿದ್ದಾರೆ. ರಾಮ್ ಚರಣ್ ಅವರ ಹೃದಯ ವೈಶಾಲ್ಯತೆಗೆ ಅಭಿಮಾನಿಗಳು ಟ್ವೀಟರ್ ನಲ್ಲಿ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

SCROLL FOR NEXT