ಪೃಥ್ವಿ ಅಂಬರ್‌ 
ಸಿನಿಮಾ ಸುದ್ದಿ

ಪೃಥ್ವಿ ಅಂಬರ್- ಅಯನ ನಟನೆಯ 'ದೂರದರ್ಶನ' ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್

ಶಿವರಾಜಕುಮಾರ್ ಅವರ ಬೈರಾಗಿ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ ಪೃಥ್ವಿ ಅಂಬರ್ ಇದೀಗ ತಮ್ಮ ಮುಂದಿನ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ನಟನ ಮುಂದಿನ, 'ದೂರದರ್ಶನ' ಸಿನಿಮಾ ಮಾರ್ಚ್ 3 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಶಿವರಾಜಕುಮಾರ್ ಅವರ ಬೈರಾಗಿ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ ಪೃಥ್ವಿ ಅಂಬರ್ ಇದೀಗ ತಮ್ಮ ಮುಂದಿನ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ನಟನ ಮುಂದಿನ, 'ದೂರದರ್ಶನ' ಸಿನಿಮಾ ಮಾರ್ಚ್ 3 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಬಿಡುಗಡೆಯ ಬಗ್ಗೆ ಅಧಿಕೃತ ಪ್ರಕಟಣೆಯನ್ನು ಚಿತ್ರತಂಡ ಭಾನುವಾರ ಹೊರಡಿಸಿದೆ.

ಇದೇ ಮೊದಲ ಬಾರಿಗೆ ನಿರ್ದೇಶಕರ ಕ್ಯಾಪ್ ತೊಟ್ಟಿರುವ ನಿರ್ದೇಶಕ ಸುಕೇಶ್ ಶೆಟ್ಟಿ ಅವರೇ ಸ್ವತಃ ಕಥೆಯನ್ನು ಬರೆದಿದ್ದಾರೆ. ಅವರು ಈ ಹಿಂದೆ ತುಳು ಚಲನಚಿತ್ರಗಳಲ್ಲಿ ಮತ್ತು ಕನ್ನಡ ಚಲನಚಿತ್ರ ಟ್ರಂಕ್ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. 1980ರ ದಶಕದಲ್ಲಿ ದೂರದರ್ಶನ ಮಾಡಿದ್ದ ಮೋಡಿಯ ಕುರಿತಾದ ಕಥೆಯನ್ನು ಹೊಂದಿರುವ ಚಿತ್ರವು, 'ಒಂದು ಹಳ್ಳಿಯಲ್ಲಿ ಟಿವಿ ಬಂದ ನಂತರ ಏನೆಲ್ಲಾ ಬದಲಾವಣೆಗಳು ಸಂಭವಿಸುತ್ತವೆ ಮತ್ತು ಇದು ಹಾಸ್ಯ ಆಧಾರಿತ ನಾಟಕವಾಗಿದೆ'.

ಚಿತ್ರದಲ್ಲಿ ಅಯನ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ ಮತ್ತು ಉಗ್ರಂ ಮಂಜು, ವೀಣಾ ಸುಂದರ್, ಹರಿಣಿ ಶ್ರೀಕಾಂತ್, ಹುಲಿ ಕಾರ್ತಿಕ್, ಸೂರಜ್, ಸೂರ್ಯ ಕುಂದಾಪುರ ಮತ್ತು ದೀಪಕ್ ರೈ ಪಣಾಜೆ ನಟಿಸಿದ್ದಾರೆ. ರಾಜೇಶ್ ಭಟ್ ಅವರ ವಿಎಸ್ ಮೀಡಿಯಾ ಎಂಟರ್‌ಪ್ರೈಸಸ್ ನಿರ್ಮಿಸಿರುವ ದೂರದರ್ಶನ ಚಿತ್ರಕ್ಕೆ ಅರುಣ್ ಸುರೇಶ್ ಛಾಯಾಗ್ರಹಣ, ವಾಸುಕಿ ವೈಭವ್ ಸಂಗೀತ, ಪ್ರದೀಪ್ ರಾವ್ ಸಂಕಲನವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT