ರಿಷಬ್ ಶೆಟ್ಟಿ 
ಸಿನಿಮಾ ಸುದ್ದಿ

ರಿಷಬ್ ಶೆಟ್ಟಿ ಮುಡಿಗೆ ಮತ್ತೊಂದು ಗರಿ: ಪ್ರತಿಷ್ಠಿತ 'ದಾದಾ ಸಾಹೇಬ್‌ ಪಾಲ್ಕೆ' ಪ್ರಶಸ್ತಿಗೆ ಭಾಜನರಾದ ಕಾಂತಾರ ನಟ

ನಟ ರಿಷಬ್ ಶೆಟ್ಟಿ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದು, ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.

ನಟ ರಿಷಬ್ ಶೆಟ್ಟಿ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದು, ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.

ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ. ಮುಂಬೈನಲ್ಲಿ ಫೆ 20ರಂದು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಕಾಂತಾರ ಮೂಲಕ ವಿಶ್ವದ ಮನ್ನಣೆ ಪಡೆದ ರಿಷಬ್‌ ಶೆಟ್ಟಿ ತಾಜ್‌ ಲ್ಯಾಂಡ್‌ ಎಂಡ್ ಹೋಟೆಲ್‌ ನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ  ತಮ್ಮದಾಗಿಸಿಕೊಂಡಿದ್ದಾರೆ.

ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ನೀಡುವ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದ ದಾದಾಸಾಹೇಬ್ ಫಾಲ್ಕೆ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಇದೀಗ ಈ ಅತ್ಯುನ್ನತ ಗೌರವಕ್ಕೆ ರಿಷಬ್‌ ಶೆಟ್ಟಿ ಪಾತ್ರರಾಗಿದ್ದು, ನಿಜಕ್ಕೂ ಸಂತಸದ ವಿಚಾರ. ʻಅತ್ಯಂತ ಭರವಸೆಯ ನಟʼ ವಿಭಾಗದಲ್ಲಿ ರಿಷಬ್‌ ಶೆಟ್ಟಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಸಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!