ಮಲ್ಲಿಕಾ ಸಿಂಗ್ - ವಿನಯ್ ರಾಜ್‌ಕುಮಾರ್ 
ಸಿನಿಮಾ ಸುದ್ದಿ

ಸಿಂಪಲ್ ಸುನಿ-ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ಆಯ್ಕೆಯಾದ ಕಿರುತೆರೆ ನಟಿ ಮಲ್ಲಿಕಾ ಸಿಂಗ್

ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್‌ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ ಕೃಷ್ಣನ್ ಅವರು ಈಗಾಗಲೇ ಈ ಯೋಜನೆಯ ಭಾಗವಾಗಿದ್ದಾರೆ. 

ನಿರ್ದೇಶಕ ಸಿಂಪಲ್ ಸುನಿ ಜೊತೆಯಲ್ಲಿ ವಿನಯ್ ರಾಜ್ ಕುಮಾರ್ ಅವರ ಮುಂಬರುವ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಮುಗಿದಿದೆ. ಕಮಲ್ ಹಾಸನ್ ಅವರ ವಿಕ್ರಮ್‌ ಸಿನಿಮಾದ ಭಾಗವಾಗಿದ್ದ ನಟಿ ಸ್ವಾದಿಷ್ಟ ಕೃಷ್ಣನ್ ಅವರು ಈಗಾಗಲೇ ಈ ಯೋಜನೆಯ ಭಾಗವಾಗಿದ್ದಾರೆ. ಇತ್ತೀಚಿನ ವಿಚಾರವೆಂದರೆ ನಟಿ ಮಲ್ಲಿಕಾ ಸಿಂಗ್ ಅವರನ್ನು ಚಿತ್ರಕ್ಕೆ ಕರೆತರಲು ನಿರ್ಧರಿಸಲಾಗಿದೆ.

ಸ್ವಾದಿಷ್ಟ ಅವರು ಜರ್ನಲಿಸ್ಟ್ ಆಗಿ ಕಾಣಿಸಿಕೊಂಡರೆ, ಮಲ್ಲಿಕಾ ಕಾಶ್ಮೀರಿ ಹುಡುಗಿಯ ಪಾತ್ರದಲ್ಲಿ ನಟಿಸುವ ಸಾಧ್ಯತೆ ಇದೆ. ಕನ್ನಡದಲ್ಲಿ ಡಬ್ಬಿಂಗ್ ಆವೃತ್ತಿಯನ್ನು ಹೊಂದಿದ್ದ ಜನಪ್ರಿಯ ಹಿಂದಿ ಧಾರಾವಾಹಿ 'ರಾಧಾಕೃಷ್ಣ' ಖ್ಯಾತಿಯ ಮಲ್ಲಿಕಾ ಗಲ್ಲಿ ಬಾಯ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಕನ್ನಡದಲ್ಲಿ ಇದು ಅವರ ಮೊದಲ ಸಿನಿಮಾ ಆಗಲಿದೆ.

ಚಿತ್ರಕ್ಕೆ ಮೈಸೂರು ರಮೇಶ್ ಅವರು ಬಂಡವಾಳ ಹೂಡಿದ್ದು, ಮಲ್ಲಿಕಾ ಸಿಂಗ್ ಅವರ ಪಾತ್ರದ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳುವ ನಿರೀಕ್ಷೆಯಿದೆ.

ಈಮಧ್ಯೆ, ವಿನಯ್ ಅವರು ಕೀರ್ತಿ ನಿರ್ದೇಶನದ 'ಅಂದೊಂದಿತ್ತು ಕಾಲ' ಮತ್ತು ಶ್ರೀಲೇಶ್ ನಾಯರ್ ಅವರ 'ಪೆಪೆ' ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ, ಅದು ಬಿಡುಗಡೆಗೆ ಸಿದ್ಧವಾಗಿದೆ. ಅಲ್ಲದೆ, 'ಗ್ರಾಮಾಯಣ' ಸಿನಿಮಾದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ಸುನಿ ಅವರು ಹೊಸಬರಾದ ದುಷ್ಯಂತ್ ಮತ್ತು ಆಶಿಕಾ ರಂಗನಾಥ್ ಅಭಿನಯದ ಗಥವೈಭವ ಚಿತ್ರವನ್ನು ಸಹ ನಿರ್ದೇಶಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT