ವೀರೇಂದ್ರ ಹೆಗ್ಗಡೆ 
ಸಿನಿಮಾ ಸುದ್ದಿ

ವೀರ ಕಂಬಳ ಸಿನೆಮಾದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ನಟನೆ: ಫೋಟೋ ವೈರಲ್

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ  ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.

ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ  ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.

ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿರುವುದು ವಿಶೇಷ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ.
ತುಳುನಾಡಿನ ಕೋಣಗಳ ಓಟದ ಹೆಮ್ಮೆಯ ಕಂಬಳ ಸ್ಪರ್ಧೆಯನ್ನು ಕೇಂದ್ರ ಬಿಂದುವಾಗಿಟ್ಟುಕೊಂಡು ತಯಾರಾಗುತ್ತಿರುವ ವೀರ ಕಂಬಳ ಎಂಬ ಸಿನೆಮಾದ ಶೂಟಿಂಗ್ ಭರದಿಂದ ಸಾಗಿದೆ.

ಎಸ್‌.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಬರೋಬ್ಬರಿ 7 ವರ್ಷಗಳ ಕಾಲ ಸಂಶೋಧನೆ ಮಾಡಿ ಕಥೆ ಬರೆಯಲಾಗಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಯಲ್ಲಿ ಕೂಡ ವೀರ ಕಂಬಳ ಸಿನೆಮಾ ತೆರೆ ಕಾಣಲಿದೆ. ತುಳುವಿನಲ್ಲಿ ಈ ಚಿತ್ರಕ್ಕೆ 'ಬಿರ್ದ್‌ದ ಕಂಬಳ' ಎಂದು ಹೆಸರಿಡಲಾಗಿದೆ.

ಈವರೆಗೆ ಹಲವು ಚಲನಚಿತ್ರಗಳಲ್ಲಿ ಕಂಬಳವನ್ನು ಚಿತ್ರದ ಭಾಗವಾಗಿ ನೋಡಿದ್ದೇವೆ ಹೊರತು ಸಂಪೂರ್ಣ ಕಂಬಳದ ಬಗ್ಗೆ ಚಿತ್ರ ಬಂದಿಲ್ಲ.  ವೀರ ಕಂಬಳ ಎಂಬ ಸಿನೆಮಾ ಕಂಬಳ ಎಂಬ ಜಾನಪದ ಕ್ರೀಡೆಯನ್ನು ಕೇಂದ್ರವಾಗಿ ಇಟ್ಟುಕೊಂಡು ಮೂಡಿಬಂದಿರುವ ಚಿತ್ರವಾಗಿದೆ. ಈ ಚಿತ್ರಕ್ಕೆ ಅರುಣ್ ರೈ ತೋಡಾರ್ ಎಂಬವರು ಬಂಡವಾಳ ಹೂಡಿದ್ದಾರೆ.

'ವೀರ ಕಂಬಳ' ಚಿತ್ರದ ಕೊನೆ ಹಂತದ ಚಿತ್ರೀಕರಣ ಸದ್ಯ ನಡೆಯುತ್ತಿದ್ದು, ಈ ಚಿತ್ರಕ್ಕಾಗಿ ಧರ್ಮಸ್ಥಳ  ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚುತ್ತಿರುವ ಫೋಟೋ ಸಖತ್ ವೈರಲ್ ಆಗಿದೆ. ತುಳುನಾಡಿನ ಪ್ರಸಿದ್ಧ ಕಲಾವಿದರು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ಇದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್‌ ಮುಖ್ಯಭೂಮಿಕೆಯಲ್ಲಿ  ಕಾಣಿಸಿಕೊಂಡಿದ್ದಾರೆ.  ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್