ವಿನಯ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ನಿರ್ದೇಶಕ ಸಿಂಪಲ್ ಸುನಿಯೊಂದಿಗೆ ರೊಮ್ಯಾಂಟಿಕ್ ಸಿನಿಮಾದಲ್ಲಿ ನಟ ವಿನಯ್ ರಾಜ್‌ಕುಮಾರ್

ಇದೀಗ 'ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ' ಖ್ಯಾತಿಯ ನಿರ್ದೇಶಕ ಸುನಿ ಅವರ ಮುಂದಿನ ಸಿನಿಮಾದಲ್ಲಿ ವಿನಯ್ ರಾಜ್‌ಕುಮಾರ್ ಅವರು ನಟಿಸಲಿದ್ದಾರೆ. ಈ ಸಿನಿಮಾಗಾಗಿ ಇದೇ ಮೊದಲ ಬಾರಿಗೆ ನಟ ಹಾಗೂ ನಿರ್ದೇಶಕ ಸುನಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ.

ರಾಘವೇಂದ್ರ ರಾಜ್‌ಕುಮಾರ್ ಅವರ ಪುತ್ರ ನಟ ವಿನಯ್ ರಾಜ್‌ಕುಮಾರ್ ಅವರು 2023ಕ್ಕೆ ಕೆಲವು ಉತ್ತಮ ಸಿನಿಮಾಗಳನ್ನು ಹೊಂದಿದ್ದು, ಕೀರ್ತಿ ನಿರ್ದೇಶನದ 'ಅಂದೊಂದಿತ್ತು ಕಾಲ' ಸೇರಿದಂತೆ 'ಪೆಪೆ' ಮತ್ತು ಕಾದಂಬರಿ ಆಧರಿತ 'ಗ್ರಾಮಾಯಣ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದೀಗ 'ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ' ಖ್ಯಾತಿಯ ನಿರ್ದೇಶಕ ಸುನಿ ಅವರ ಮುಂದಿನ ಸಿನಿಮಾದಲ್ಲಿ ವಿನಯ್ ರಾಜ್‌ಕುಮಾರ್ ಅವರು ನಟಿಸಲಿದ್ದಾರೆ.

ನಿರ್ದೇಶಕ ಸುನಿ

ಈ ಸಿನಿಮಾಗಾಗಿ ಇದೇ ಮೊದಲ ಬಾರಿಗೆ ನಟ ಹಾಗೂ ನಿರ್ದೇಶಕ ಸುನಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಚಿತ್ರವನ್ನು ಮೈಸೂರು ರಮೇಶ್ ನಿರ್ಮಿಸಲಿದ್ದಾರೆ. ನಿರ್ದೇಶಕ ಸುನಿ ಅವರು ಸದ್ಯ ತಮ್ಮ 'ಗತವೈಭವ' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ನಾಯಕನಾಗಿ ದುಷ್ಯಂತ್‌ ಮತ್ತು ನಟಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ.

ಸದ್ಯ 'ಗತವೈಭವ' ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿರುವಾಗಲೇ ನಿರ್ದೇಶಕರು, ವಿನಯ್ ರಾಜ್‌ಕುಮಾರ್ ಅವರ ಸಿನಿಮಾಗೂ ಏಕಕಾಲದಲ್ಲಿ ತಯಾರಿ ನಡೆಸುತ್ತಿದ್ದಾರೆ.

ಈಮಧ್ಯೆ, ಕೊನೆಯದಾಗಿ '10' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ವಿನಯ್, ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಶ್ರೀಲೇಶ್ ನಾಯರ್ ಅವರ ಪೆಪೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನೆರಡು ತಿಂಗಳಲ್ಲಿ ಸುನಿ-ವಿನಯ್ ಚಿತ್ರದ ಅಧಿಕೃತ ಘೋಷಣೆಯಾಗಲಿದ್ದು, ಉಳಿದ ತಾರಾಗಣ ಮತ್ತು ಸಿಬ್ಬಂದಿಯ ವಿವರಗಳು ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್