ವಸಿಷ್ಠ ಸಿಂಹ ಮತ್ತು ಹರಿ ಪ್ರಿಯಾ 
ಸಿನಿಮಾ ಸುದ್ದಿ

ಸಿಂಹ- ಪ್ರಿಯಾ ವಿವಾಹಕ್ಕೆ ಮೂಹೂರ್ತ ಫಿಕ್ಸ್: ಮೈಸೂರಿನಲ್ಲಿ ಸಪ್ತಪದಿ ತುಳಿಯಲಿದೆ ಚಂದನವನದ ಮುದ್ದು ಜೋಡಿ!

ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮೈಸೂರಿನಲ್ಲಿ ತಮ್ಮ ವಿವಾಹ ಸಮಾರಂಭ ನಡೆಸಲು ಇಬ್ಬರು ನಿರ್ಧರಿಸಿದ್ದಾರೆ.

ಮೈಸೂರು: ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮೈಸೂರಿನಲ್ಲಿ ತಮ್ಮ ವಿವಾಹ ಸಮಾರಂಭ ನಡೆಸಲು ಇಬ್ಬರು ನಿರ್ಧರಿಸಿದ್ದಾರೆ.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇದೇ ತಿಂಗಳ 26 ರಂದು ಚಂದನವನದ ಮುದ್ದು ಜೋಡಿಯ ವಿವಾಹ ನಡೆಯಲಿದೆ.  ಹರಿಪ್ರಿಯಾ-ವಸಿಷ್ಠ  ಅವರು ಆಶ್ರಮಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪ್ರತಾಪ್​ ಸಿಂಹ  ಕೂಡ ಜೊತೆಗಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ತಿಳಿಸಿದ್ದಾರೆ.

ಖ್ಯಾತ ಚಲನಚಿತ್ರ ನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ವಿವಾಹ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇದೇ ತಿಂಗಳ 26 ರಂದು ನಡೆಯಲಿದೆ" ಎಂದಿರುವ ಅವರು ಆಶ್ರಮದಲ್ಲಿ ಸ್ವಾಮೀಜಿಗಳೊಂದಿಗೆ ಇರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಈ ತಾರಾ ಜೋಡಿಗೆ ಕಳೆದ ಡಿಸೆಂಬರ್​ 3 ರಂದು ಹರಿಪ್ರಿಯಾ ನಿವಾಸದಲ್ಲಿ ನಿಶ್ಚಿತಾರ್ಥ ನಡೆದಿತ್ತು. ಕುಟುಂಬಸ್ಥರು, ಸ್ನೇಹಿತರು ಮಾತ್ರ ಈ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತಮ್ಮ ಪ್ರೀತಿಯ ಬಗ್ಗೆ ಮಾತನಾಡಿದ್ದ ಬಹುಭಾಷಾ ನಟಿ ಹರಿಪ್ರಿಯಾ ಮುದ್ದಾದ ನಾಯಿ ಮರಿ ಕ್ರಿಸ್ಟಲ್​ ಇಂದಾಗಿ ತಾವು ಪ್ರೀತಿಯಲ್ಲಿ ಬಿದ್ದ ಬಗ್ಗೆ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

Russian strike: ಉಕ್ರೇನ್‌ ರೈಲು ನಿಲ್ದಾಣದಲ್ಲಿ ರಷ್ಯಾ 'ಡ್ರೋನ್' ದಾಳಿ; ಓರ್ವ ಸಾವು, 30 ಮಂದಿಗೆ ಗಾಯ! Video

ಬೆಂಗಳೂರು: ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ; Oyo ರೂಂನಲ್ಲಿ ಮಹಿಳೆ ಆತ್ಮಹತ್ಯೆ!

ಪ್ರಧಾನಿ ಮೋದಿ ಜೊತೆಗಿನ ವರ್ಚುವಲ್ ಸಭೆಯಲ್ಲಿ, ಕೈ ಮುಗಿದು ಕುಳಿತ ನಿತೀಶ್ ಕುಮಾರ್; ವ್ಯಾಪಕ ಟೀಕೆ!: Video

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

SCROLL FOR NEXT