ಕನ್ನಡ ನಟ ಯುವ 
ಸಿನಿಮಾ ಸುದ್ದಿ

ವೇಶ್ಯಾವಾಟಿಕೆ ಜಾಲದಲ್ಲಿ ಬಂಧಿತ ವ್ಯಕ್ತಿ ನಾನಲ್ಲ: ನ್ಯೂರಾನ್ ಚಿತ್ರದ ನಟ 'ಯುವ' ಸ್ಪಷ್ಟನೆ

ಡೇಟಿಂಗ್ ಆ್ಯಪ್‌ನಲ್ಲಿ ಮಹಿಳೆಯರ ನಕಲಿ‌ ಫೋಟೊ ಸೃಷ್ಟಿಸಿ ಗ್ರಾಹಕರನ್ನು ವೇಶ್ಯಾವಾಟಿಕೆ ದಂಧೆಗೆ ಸೆಳೆದು ಅಕ್ರಮ ಹಣ‌ ಸಂಪಾದನೆ‌ ಪ್ರಕರಣದಲ್ಲಿ ಇತ್ತೀಚೆಗೆ ಸ್ಯಾಂಡಲ್​ವುಡ್​ ನಟರೊಬ್ಬರ ಹೆಸರು ಕೇಳಿಬಂದಿತ್ತು. ಈ ಸಂಬಂಧ ನಟ ಯುವ ಮಾಧ್ಯಮಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ ಮಹಿಳೆಯರ ನಕಲಿ‌ ಫೋಟೊ ಸೃಷ್ಟಿಸಿ ಗ್ರಾಹಕರನ್ನು ವೇಶ್ಯಾವಾಟಿಕೆ ದಂಧೆಗೆ ಸೆಳೆದು ಅಕ್ರಮ ಹಣ‌ ಸಂಪಾದನೆ‌ ಪ್ರಕರಣದಲ್ಲಿ ಇತ್ತೀಚೆಗೆ ಸ್ಯಾಂಡಲ್​ವುಡ್​ ನಟರೊಬ್ಬರ ಹೆಸರು ಕೇಳಿಬಂದಿತ್ತು.  ಈ ಸಂಬಂಧ ನಟ ಮಾಧ್ಯಮಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ನನ್ನನ್ನೇ ಹೋಲುವ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.‌ ನಾನು ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು  ನ್ಯೂರಾನ್ ಚಿತ್ರದ ನಾಯಕ ನಟ ಯುವ ಸ್ಪಷ್ಟನೆ ನೀಡಿದ್ದಾರೆ. ಖಾಸಗಿ ಆ್ಯಪ್​​ನಲ್ಲಿ ಯುವ ನಟ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿಕೊಂಡು ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಆರೋಪದಡಿ ಅವರನ್ನು ಸುದ್ದುಗುಂಟೆಪಾಳ್ಯ‌ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿತ್ತು. ಈ ಸಂಬಂಧ ಅವರು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು.

ನನ್ನ ಹಾಗೇ ಇರುವ ಮಂಜುನಾಥ್ ಅಲಿಯಾಸ್ ಸಂಜು ಎಂಬಾತನನ್ನ‌ು ವೇಶ್ಯಾವಾಟಿಕೆ ಆರೋಪದಡಿ ಬಂಧಿಸಿದ್ದಾರೆ. ಆದರೆ, ಮಾಧ್ಯಮಗಳಲ್ಲಿ‌ ನನ್ನ ಹೆಸರು ಪ್ರಸ್ತಾಪಿಸಲಾಗಿತ್ತು. ಈ ಸುದ್ದಿ ನೋಡಿದಾಕ್ಷಣ ನಾನೇ‌ ಆತಂಕಕ್ಕೆ‌ ಒಳಗಾದೆ. ಕೂಡಲೇ‌‌ ಸ್ನೇಹಿತರು, ಸಂಬಂಧಿಕರೆಲ್ಲರೂ ಫೋನ್ ಮಾಡಿ ವಿಚಾರಿಸಿದ್ದರು. ನಾನು ಮನೆಯಲ್ಲೇ‌ ಇದ್ದೇನೆ. ನನ್ನನ್ನು ಪೊಲೀಸರು ಬಂಧಿಸಿಲ್ಲ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!