ರಚಿತಾ ರಾಮ್ 
ಸಿನಿಮಾ ಸುದ್ದಿ

ಮಂಡ್ಯ: ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲು!

ಸ್ಯಾಂಡಲ್​ವುಡ್​ನ ಡಿಂಪಲ್​ ಕ್ವೀನ್ ನಟಿ ರಚಿತಾ ರಾಮ್ ವಿರುದ್ಧ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಮಂಡ್ಯ: ಸ್ಯಾಂಡಲ್​ವುಡ್​ನ ಡಿಂಪಲ್​ ಕ್ವೀನ್ ನಟಿ ರಚಿತಾ ರಾಮ್ ವಿರುದ್ಧ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಸಂವಿಧಾನಕ್ಕೆ ಮತ್ತು ಗಣರಾಜ್ಯೋತ್ಸವ ದಿನಕ್ಕೆ ರಚಿತಾ ರಾಮ್​ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿ. ಶಿವಲಿಂಗಯ್ಯ ಒತ್ತಾಯಿಸಿದ್ದಾರೆ.

ಇತ್ತೀಚೆಗೆ ನಡೆದ ‘ಕ್ರಾಂತಿ’ ಸಿನಿಮಾದ ಬೃಹತ್ ಬಹಿರಂಗ ಕಾರ್ಯಕ್ರಮದಲ್ಲಿ ರಚಿತಾ ರಾಮ್ ಅವರು ಪ್ರತಿ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಈ ಬಾರಿ ಗಣರಾಜ್ಯೋತ್ಸವ ಮರೆತು ಕ್ರಾಂತಿ ಉತ್ಸವ ಮಾಡಿ ಎಂದಿದ್ದಾರೆ. ಇದು ಸಂವಿಧಾನ ವಿರೋಧಿ ಹೇಳಿಕೆಯಾಗಿದೆ. ಸಂವಿಧಾನ ಜಾರಿಯಾದ ದಿನಕ್ಕೆ ಮಾಡಿದ ಅಪಮಾನ ಎಂದು ಸುದ್ದಿಗೋಷ್ಠಿಯಲ್ಲಿ ಶಿವಲಿಂಗಯ್ಯ ಆರೋಪಿಸಿದರು.

ರಚಿತಾ ರಾಮ್​ ಅವರ ಹೇಳಿಕೆ ದೇಶ ದ್ರೋಹ ಹೇಳಿಕೆಯಾಗಿದ್ದು, ಇವರ ಮೇಲೆ ದೇಶ ದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ರಚಿತಾ ರಾಮ್ ವಿರುದ್ಧ ಮದ್ದೂರು ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT