ನಾಗತಿಹಳ್ಳಿ ಚಂದ್ರಶೇಖರ್ ಮತ್ತು ನಿರೂಪ್ ಭಂಡಾರಿ 
ಸಿನಿಮಾ ಸುದ್ದಿ

ನಾಗತಿಹಳ್ಳಿ ಚಂದ್ರಶೇಖರ್ ಮುಂದಿನ ಸಿನಿಮಾಗೆ ನಿರೂಪ್ ಭಂಡಾರಿ ನಾಯಕ!

ಅಮೆರಿಕಾ ಅಮೆರಿಕಾ ಸಿನಿಮಾ ಖ್ಯಾತಿಯ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ಮುಂದಿನ ಸಿನಿಮಾ ಶೂಟಿಂಗ್ ಫೆಬ್ರವರಿಯಲ್ಲಿ ಆರಂಭಿಸಲಿದ್ದಾರೆ.

ಸ್ಯಾಂಡಲ್ ವುಡ್ ಮೆಸ್ಟ್ರು ಎಂದೇ ಖ್ಯಾತಿ ಪಡೆದಿರುವ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ಮುಂದಿನ ಸಿನಿಮಾಗಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಅಮೆರಿಕಾ ಅಮೆರಿಕಾ ಸಿನಿಮಾ ಖ್ಯಾತಿಯ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ಮುಂದಿನ ಸಿನಿಮಾ ಶೂಟಿಂಗ್ ಫೆಬ್ರವರಿಯಲ್ಲಿ ಆರಂಭಿಸಲಿದ್ದಾರೆ.

ಶಾನ್ವಿ ಶ್ರೀವಾಸ್ತವ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಿನಿಮಾದಲ್ಲಿ ನಿರೂಪ್ ಭಂಡಾರಿ ನಾಯಕನ ರೋಲ್ ಮಾಡುತ್ತಿದ್ದಾರೆ.  ವಿಕ್ರಾಂತ್ ರೋಣ ಸಿನಿಮಾದಲ್ಲಿ ನಟಿಸಿದ್ದ ರಂಗಿತರಂಗ ನಟ ನಿರೂಪ್, ಈ ಹಿಂದೆ ಮಾಡದ ರೀತಿಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಸಂಬಂಧ ನಿರ್ದೇಶಕರು ಮುಂದಿನ ದಿನಗಳಲ್ಲಿ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ. ಶೀಘ್ರವೇ ತಂತ್ರಜ್ಞರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.

ಅಮೆರಿಕಾ ಅಮೆರಿಕಾ ಸಿನಿಮಾ ಸಂಗೀತ ನಿರ್ದೇಶಕ ಮನೋಮೂರ್ತಿ  ಈ ಸಿನಿಮಾಗಾಗಿ ಮತ್ತೆ ಒಂದಾಗಿದ್ದಾರೆ ಎಸ್ ಕೆ ರಾವ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಪರೀಕ್ಷೆ ನಡೆಸುವ NTA ನಲ್ಲಿ ಮೇಜರ್ ಸರ್ಜರಿ: 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ಇರಾನ್ ಜಲ ಪ್ರದೇಶದಲ್ಲಿ 28 ಭಾರತೀಯ ಸಿಬ್ಬಂದಿಯಿದ್ದ LPG ಟ್ಯಾಂಕರ್ ಮೇಲೆ ದಾಳಿ!

ಉಪವಾಸ ಸತ್ಯಾಗ್ರಹ ಅಂತ್ಯ: ಸೋನಮ್ ವಾಂಗ್‌ಚುಕ್ ವಿರುದ್ಧ ಹೆಚ್ಚಾದ ಟೀಕೆ, ಪತ್ನಿ ಗೀತಾಂಜಲಿ ಗರಂ!

ಪಾಕಿಸ್ತಾನದಲ್ಲಿ ರಕ್ತದೋಕುಳಿ: ಸೇನಾ ಚೆಕ್‌ಪಾಯಿಂಟ್‌ ಧ್ವಂಸ; 15 Pak ಸೈನಿಕರು ಬಲಿ, 12 ಉಗ್ರರು ಸಾವು!

'ಇನ್‌ಸ್ಟಾಗ್ರಾಮ್‌ನಲ್ಲಿ ಯುವಕರೊಂದಿಗೆ ತೊಡಗಿಸಿಕೊಳ್ಳಿ, ರೀಲ್‌ಗಳನ್ನು ಪೋಸ್ಟ್ ಮಾಡಿ': ಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ