ಲಕ್ಷ್ಮಣ್ 
ಸಿನಿಮಾ ಸುದ್ದಿ

ಕನ್ನಡದ ಖ್ಯಾತ ಖಳನಟ ಲಕ್ಷ್ಮಣ್ ವಿಧಿವಶ

ಹಿರಿಯ ನಟ ಲಕ್ಷ್ಮಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಲಕ್ಷ್ಮಣ್ ಅವರಿಗೆ 74 ವರ್ಷವಾಗಿತ್ತು. ಲಕ್ಷ್ಮಣ್ ಅವರು ಅಂಬರೀಶ್, ವಿಷ್ಣುವರ್ಧನ್  ಅವರ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು.

ಹಿರಿಯ ನಟ ಲಕ್ಷ್ಮಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಲಕ್ಷ್ಮಣ್ ಅವರಿಗೆ 74 ವರ್ಷವಾಗಿತ್ತು. ಲಕ್ಷ್ಮಣ್ ಅವರು ಅಂಬರೀಶ್ ಅವರ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು.

ಭಾನುವಾರ (ಜನವರಿ 22ರಂದು) ರಾತ್ರಿ ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಯಿತು. ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

ಲಕ್ಷ್ಮಣ್ ಅವರು ಪೋಷಕ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಅನೇಕ ಸಿನಿಮಾಗಳಲ್ಲಿ ಅವರು ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದರು. ವೃತ್ತಿ ಜೀವನದಲ್ಲಿ 300ಕ್ಕೂ ಅಧಿಕ ಸಿನಿಮಾಗಳಲ್ಲಿ ಲಕ್ಷ್ಮಣ್ ಬಣ್ಣ ಹಚ್ಚಿದ್ದರು. ‘ಒಲವಿನ ಉಡುಗೊರೆ’, ‘ಸಾಂಗ್ಲಿಯಾನ’ ಮೊದಲಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದರು.

ಅಂಬರೀಷ್​, ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಕನ್ನಡದ ದಿಗ್ಗಜರ ಜೊತೆ ಅವರು ತೆರೆ ಹಂಚಿಕೊಂಡಿದ್ದರು. ಆರಂಭದಲ್ಲಿ ಖಳನಟನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಲಕ್ಷ್ಮಣ್ ನಂತರ ಪೋಷಕ ಪಾತ್ರದಲ್ಲಿ ಅಭಿನಯಿಸಿದ್ದರು. ಇನ್ನೂ ನಟ ಲಕ್ಷ್ಮಣ್ ನಿಧನಕ್ಕೆ ಹಲವು ಕಲಾವಿದರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT