ಸಿನಿಮಾ ಸುದ್ದಿ

ಬಾಲಿವುಡ್‌ ನಟಿ ರಾಖಿ ಸಾವಂತ್‌ ತಾಯಿ ವಿಧಿವಶ

Manjula VN

ಮುಂಬೈ: ಬಾಲಿವುಡ್‌ ನಟಿ ರಾಖಿ ಸಾವಂತ್‌ ಅವರ ತಾಯಿ ಜಯಾ ಭೇದಾ ಸಾವಂತ್‌ ಅವರು ಶನಿವಾರ ನಿಧನರಾಗಿದ್ದಾರೆ.

ಸುದೀರ್ಘ ಸಮಯದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಯಾ ಭೇದಾ, ಮುಂಬೈನ ಜುಹು ಪ್ರದೇಶದಲ್ಲಿರುವ ಸಿಟಿ ಕೇರ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ.

ಜಯಾ ಭೇದಾ ಅವರು ಹಲವು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಸುದೀರ್ಘವಾಗಿ ಚಿಕಿತ್ಸೆ ನೀಡಿದರೂ ಕ್ಯಾನ್ಸರ್‌ ದೇಹದ ಹಲವು ಭಾಗಗಳಿಗೆ ವಿಸ್ತರಿಸಿತ್ತು. ಹಾಗಾಗಿ, ಕೆಲ ದಿನಗಳಿಂದ ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿತ್ತು. ಇದರಂತೆ ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ರಾಖಿ ಸಾವಂತ್‌ ತಾಯಿಯ ನಿಧನಕ್ಕೆ ಬಾಲಿವುಡ್‌ನ ಹಲವರು ವಿಷಾದ ವ್ಯಕ್ತಪಡಿಸಿದ್ದಾರೆ.

SCROLL FOR NEXT