ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ.
ಸಾಕ್ಷಿ ಎಂಬ ಬಾಲಕಿ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಕಿಚ್ಚ ಸುದೀಪ್ ಎಂದರೆ ಬಾಲಕಿಗೆ ಪಂಚಪ್ರಾಣ. ತಮ್ಮ ನೆಚ್ಚಿನ ನಟನನ್ನು ಜೀವನದಲ್ಲಿ ಒಮ್ಮೆಯಾದರೂ ಭೇಟಿಯಾಗಬೇಕು ಎಂಬ ಕನಸು ಹೊಂದಿದ್ದಳು.
ಇನ್ನು ತಮ್ಮ ಪುಟ್ಟ ಅಭಿಮಾನಿಯ ಆಸೆ ಮತ್ತು ಆರೋಗ್ಯ ಸಮಸ್ಯೆ ಬಗ್ಗೆ ತಿಳಿದುಕೊಂಡ ಕಿಚ್ಚ ಸುದೀಪ್ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಜೊತೆ ಖುಷಿಯ ಮಾತುಗಳನ್ನಾಡಿದರು.