ಗಣ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ನಟ ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ 'ಗಣ' ಸಿನಿಮಾದ ಟೀಸರ್ ಬಿಡುಗಡೆ!

ಇತ್ತೀಚೆಗಷ್ಟೇ ನಡೆದ ಕಾರ್ಯಕ್ರಮವೊಂದರಲ್ಲಿ ಗಣ ಚಿತ್ರತಂಡ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಈ ಚಿತ್ರವನ್ನು ಈ ಮೊದಲು '1: ನೇನೊಕ್ಕಡಿನೆ' ಮತ್ತು '100% ಲವ್‌'ನಂತಹ ತೆಲುಗು ಸಿನಿಮಾಗಳಲ್ಲಿ ಕೆಲಸ ಮಾಡಿದ್ದ, ಭೌತಶಾಸ್ತ್ರದ ಶಿಕ್ಷಕರಿಂದ ನಿರ್ದೇಶಕರಾಗಿ ಬಡ್ತಿ ಪಡೆದಿರುವ ಬರಹಗಾರ ಹರಿಪ್ರಸಾದ್ ಜಕ್ಕಾ ಅವರ ಮೊದಲ ಕನ್ನಡ ಸಿನಿಮಾವಾಗಿದೆ. 

ಇತ್ತೀಚೆಗಷ್ಟೇ ನಡೆದ ಕಾರ್ಯಕ್ರಮವೊಂದರಲ್ಲಿ ಗಣ ಚಿತ್ರತಂಡ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಈ ಚಿತ್ರವನ್ನು ಈ ಮೊದಲು '1: ನೇನೊಕ್ಕಡಿನೆ' ಮತ್ತು '100% ಲವ್‌'ನಂತಹ ತೆಲುಗು ಸಿನಿಮಾಗಳಲ್ಲಿ ಕೆಲಸ ಮಾಡಿದ್ದ, ಭೌತಶಾಸ್ತ್ರದ ಶಿಕ್ಷಕರಿಂದ ನಿರ್ದೇಶಕರಾಗಿ ಬಡ್ತಿ ಪಡೆದಿರುವ ಬರಹಗಾರ ಹರಿಪ್ರಸಾದ್ ಜಕ್ಕಾ ಅವರ ಮೊದಲ ಕನ್ನಡ ಸಿನಿಮಾವಾಗಿದೆ. 

'ಚಿತ್ರವು 1993 ಮತ್ತು 2022ರ ಹಿನ್ನೆಲೆಯಲ್ಲಿ ನಡೆಯುವ ಕಥೆಯಾಗಿದೆ. ವಾಸ್ತವವಾಗಿ, ಗಣ ಸಿನಿಮಾವನ್ನು ಸಮಯದ ವಿರುದ್ಧ ಹೋರಾಡುವ ಚಿತ್ರವೆಂದು ಪರಿಗಣಿಸಬಹುದು' ಎಂದು ನಿರ್ದೇಶಕರು ವಿವರಿಸುತ್ತಾರೆ. 

ಚೆರ್ರಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಪಾರ್ಥು ನಿರ್ಮಿಸಿದ ಗಣ ಸಿನಿಮಾದ ಮೂಲಕ ಬಹುಭಾಷಾ ನಟಿ ವೇದಿಕಾ ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ಚಿತ್ರದಲ್ಲಿ ಯಶಾ ಶಿವಕುಮಾರ್ ನಾಯಕಿಯಾಗಿ ನಟಿಸಿದ್ದಾರೆ.

ಚಿತ್ರದ ತಾರಾಗಣದಲ್ಲಿ ನಟಿ ಕೃಷಿ ತಾಪಂಡ, ಶಿವರಾಜ್ ಕೆಆರ್ ಪೇಟೆ, ಮಾಸ್ಟರ್ ರಘುನಂದನ್ ಕೂಡ ಇದ್ದಾರೆ.

ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ ಮತ್ತು ಜೈ ಆನಂದ್ ಅವರ ಛಾಯಾಗ್ರಹಣದೊಂದಿಗೆ ಗಣ ಚಿತ್ರ ಈಗ ಪೋಸ್ಟ್ ಪ್ರೊಡಕ್ಷನ್‌ ಹಂತದಲ್ಲಿದೆ ಮತ್ತು ಶೀಘ್ರದಲ್ಲೇ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಿಸಲು ಚಿತ್ರತಂಡ ಯೋಜಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT