ಅರುಣ್ ರಾಮ್ ಗೌಡ 
ಸಿನಿಮಾ ಸುದ್ದಿ

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅರುಣ್ ರಾಮ್ ಗೌಡ: ಅಯೋಧ್ಯೆಯಲ್ಲಿ ಟೀಸರ್ ಅನಾವರಣ

'ಮುದ್ದು ಮನಸೆ' ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ  ನಟ ಅರುಣ್ ರಾಮ್ ಗೌಡ ಪುನೀತ್ ರಾಜ್​​ಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದರು.

'ಮುದ್ದು ಮನಸೆ' ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ  ನಟ ಅರುಣ್ ರಾಮ್ ಗೌಡ ಪುನೀತ್ ರಾಜ್​​ಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದರು.

ಈಗ ಸದ್ಯ ನಟ ಅರುಣ್ ರಾಮ್ ಗೌಡ ಅಭಿನಯದ ಹೆಸರಿಡದ ಚಿತ್ರದ ಫಸ್ಟ್ ಗ್ಲಿಂಪ್ಸ್ ಅನ್ನು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಬಿಡುಗಡೆ ಮಾಡುವ ಮೂಲಕ ಚಿತ್ರರಂಡ ಗಮನ ಸೆಳೆದಿದೆ. ಕೆಲ ವರ್ಷಗಳ ಬಳಿಕ ಅರುಣ್ ರಾಮ್ ಗೌಡ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಅರುಣ್ ರಾಮ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದಾರೆ.

ಅರುಣ್​ ನಿರ್ದೇಶನದ ಮೊದಲ ಚಿತ್ರ: ಈ ಬಗ್ಗೆ ಮಾತನಾಡಿರೋ ನಟ ಅರಣ್ ರಾಮ್​​ ಗೌಡ, ಇದೊಂದು ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ. ಅಷ್ಟೇ ಅಲ್ಲ ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದೇನೆ. ಈ ಚಿತ್ರದ ನಾಯಕಿ, ವಿಲನ್ ಸೇರಿದಂತೆ ಎಲ್ಲ ಕಲಾವಿದರು ಹಾಗೂ ತಂತ್ರಜ್ಞರು ಸಾಕಷ್ಟು ಜನಪ್ರಿಯರಾಗಿರುವವರೇ ಇರುತ್ತಾರೆ.

ಜುಲೈ 7 ನನ್ನ ಹುಟ್ಟುಹಬ್ಬದ ಈ ದಿನ ಅಯೋಧ್ಯೆಯಲ್ಲಿ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿ, ಶ್ರೀರಾಮನ ಆಶೀರ್ವಾದ ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!