ಗಿಣಿರಾಮ ಸೀರಿಯಲ್ ಖ್ಯಾತಿಯ ನಟ ರಿತ್ವಿಕ್ ಮಠದ್ 
ಸಿನಿಮಾ ಸುದ್ದಿ

'ಉತ್ಸವ' ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಲು ಅರುಣ್ ಸೂರ್ಯ ರೆಡಿ

ಸ್ಯಾಂಡಲ್ ವುಡ್'ಗೆ ಹೊಸಬರ ಆಗಮನದಿಂದ ಹೊಸ ಅಲೆ ಎದ್ದಿದೆ. ಭಿನ್ನ-ವಿಭಿನ್ನ ಹಾಗೂ ಪ್ರಯೋಗಾತ್ಮಕ ಕಥೆಗಳಿಂದ ಚಿತ್ರರಂಗಕ್ಕೆ ಹೊಸ ಮೆರಗು ಸಿಗುತ್ತಿದೆ. ಅಂಥದ್ದೇ‌ ಆವೇಗದಲ್ಲಿ ರೂಪಗೊಂಡಿರುವ ಹೊಸಬರ ಸಿನಿಮಾಗೆ ‘ಉತ್ಸವ’ ಎಂಬ ಟೈಟಲ್ ಇಡಲಾಗಿದೆ. ಈ ಚಿತ್ರದ ಮೂಲಕ ಯುವ ನಿರ್ದೇಶಕರ ಆಗಮನವಾಗುತ್ತಿದೆ.

ಸ್ಯಾಂಡಲ್ ವುಡ್'ಗೆ ಹೊಸಬರ ಆಗಮನದಿಂದ ಹೊಸ ಅಲೆ ಎದ್ದಿದೆ. ಭಿನ್ನ-ವಿಭಿನ್ನ ಹಾಗೂ ಪ್ರಯೋಗಾತ್ಮಕ ಕಥೆಗಳಿಂದ ಚಿತ್ರರಂಗಕ್ಕೆ ಹೊಸ ಮೆರಗು ಸಿಗುತ್ತಿದೆ. ಅಂಥದ್ದೇ‌ ಆವೇಗದಲ್ಲಿ ರೂಪಗೊಂಡಿರುವ ಹೊಸಬರ ಸಿನಿಮಾಗೆ ‘ಉತ್ಸವ’ ಎಂಬ ಟೈಟಲ್ ಇಡಲಾಗಿದೆ. ಈ ಚಿತ್ರದ ಮೂಲಕ ಯುವ ನಿರ್ದೇಶಕರ ಆಗಮನವಾಗುತ್ತಿದೆ.

ನಾಗೇಂದ್ರ ಅರಸ್ ಸೇರಿದಂತೆ ಹಲವು ನಿರ್ದೇಶಕ ಗರಡಿಯಲ್ಲಿ ಸಹಾಯಕ ಹಾಗೂ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅರುಣ್ ಸೂರ್ಯ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಸಿನಿಮಾದಲ್ಲಿ ಗಿಣಿರಾಮ ಸೀರಿಯಲ್ ಖ್ಯಾತಿಯ ರಿತ್ವಿಕ್ ಮಠದ್ ನಾಯಕನಾಗಿ ನಟಿಸಿದ್ದಾರೆ.

ಫೇಸ್ ಟು ಪೇಸ್ ಚಿತ್ರದಲ್ಲಿ ನಟಿಸಿದ್ದ ಪೂರ್ವಿ ಜೋಶಿ ಚಿತ್ರದ ನಾಯಕಿ ನಟಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಚಿತ್ರದಲ್ಲಿ ನಾಗೇಂದ್ರ ಅರಸ್ ಮತ್ತು ಪ್ರಕಾಶ್ ತುಮ್ಮಿನಾಡ್ ಕೂಡ ನಟಿಸಿದ್ದಾರೆ.

ಪ್ರೇಮಕಥಾ ಹಂದರ ಹೊಂದಿರುವ ಉತ್ಸವ ಸಿನಿಮಾವನ್ನು ಅರಸ ಪ್ರೊಡಕ್ಷನ್ ನಡಿ ಉಷಾ ಶ್ರೀನಿವಾಸ ನಿರ್ಮಾಣ ಮಾಡಿದ್ದಾರೆ.

ಜಯಂತ್ ಕಾಯ್ಕಿಣಿ ಹಾಡುಗಳಿಗೆ ಎಮಿನಲ್ ಮಹಮ್ಮದ್ ಸಂಗೀತ ಒದಗಿಸಿದ್ದು, ಜಾವೀದ್ ಆಲಿ ಹಾಗೂ ಅಕಿಂತಾ ಕುಂಡು ಧ್ವನಿಯಾಗಿದ್ದಾರೆ. ಶಿವರಾಜ್ ಮೆಹೋ ಸಂಕಲನ, ಗೌತಮ್ ಮನು ಛಾಯಾಗ್ರಹಣ ಚಿತ್ರಕ್ಕಿದೆ. ಮನಾಲಿ ಹಾಗೂ ಗೋವಾದಲ್ಲಿ ಚಿತ್ರದ ಚಿತ್ರೀಕರಣ  ನಡೆಸಲಾಗಿದ್ದು, ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT