ಕೌಸಲ್ಯ ಸುಪ್ರಜಾ ರಾಮ ಟ್ರೇಲರ್ ರಿಲೀಸ್ 
ಸಿನಿಮಾ ಸುದ್ದಿ

ಡಾರ್ಲಿಂಗ್‌ ಕೃಷ್ಣ ನಟನೆಯ 'ಕೌಸಲ್ಯ ಸುಪ್ರಜಾ ರಾಮ' ಎಲ್ಲರ ಜೀವನಕ್ಕೂ ಕನೆಕ್ಟ್ ಆಗುವ ಕಥೆ!

ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಟ್ರೈಲರ್ ಅನಾವರಣ ಮಾಡಿದರು.  ‌

ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಟ್ರೈಲರ್ ಅನಾವರಣ ಮಾಡಿದರು.  ‌

ಈ ಟ್ರೈಲರ್ ನಲ್ಲಿ ಬಹಳ ಒಳ್ಳೆಯ ಕಥೆಯನ್ನು ಕಂಡೆ ಎಂದು ಮಾತು ಪ್ರಾರಂಭಿಸಿದ ಕಿಚ್ಚ ಸುದೀಪ್, ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷ ಇದೆ. ಶಶಾಂಕ್ ಅವರು ಎಮೋಷನ್ ಗಳನ್ನು ಹಿಡಿದಿಡುವ ರೀತಿ ನನಗೆ ಇಷ್ಟ. ಚಿತ್ರದ ಹಾಡುಗಳು ಚೆನ್ನಾಗಿವೆ. ಈ ಚಿತ್ರ ಸಹ ಚೆನ್ನಾಗಿ ಮೂಡಿಬಂದಿರುತ್ತದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ನಾನು ಇದುವರೆಗೂ ಮಾಡಿರುವ ಸಿನಿಮಾಗಳಲ್ಲಿ ಬೆಸ್ಟ್ ಸಿನಿಮಾ ಇದು. ಕಾರಣ ಈ ಚಿತ್ರದ ಕಥೆ. ಈ ಕಥೆಗೆ ಯಾವುದೋ ಒಂದು ಆಯಾಮವಿಲ್ಲ, ಹತ್ತಾರು ಆಯಾಮಗಳಿವೆ. ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ರಿಲೇಟ್ ಆಗುವ ಕಥೆ ಇದು. ಪ್ರತಿಯೊಬ್ಬರೂ ಚಿತ್ರದಲ್ಲಿನ ಯಾವುದಾದರೊಂದು ಪಾತ್ರದ ಜೊತೆಗೆ ಕನೆಕ್ಟ ಮಾಡಿಕೊಳ್ಳುತ್ತಾರೆ. ಈ ತರಹದ ಕಥೆ ಸಿಗೋದು ಕಷ್ಟ. ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಬಹುದು ಎಂಬ ನಿರೀಕ್ಷೆ ಇದೆ. ಟ್ರೇಲರ್ ಗಿಂತಿ ಥಿಯೇಟರ್ ನಲ್ಲಿ ಸಿನಿಮಾ ನೋಡುವುದು ಮತ್ತಷ್ಟು ರೋಮಾಂಚನ ಉಂಟು ಮಾಡುತ್ತದೆ ಎಂದು ನಿರ್ದೇಶಕ ಶಶಾಂಕ್ ಹೇಳಿದ್ದಾರೆ.

ಮಿಲನಾ ನಾಗರಾಜ್

ಮಿಲನಾ ನಾಗರಾಜ್ ಅವರು ಐದನೇ ಬಾರಿಗೆ ತಮ್ಮ ಪತಿ ಕೃಷ್ಣ ಅವರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಮಿಲನಾ ಅವರನ್ನು ಚಿತ್ರಕ್ಕೆ ಆಯ್ಕೆ ಮಾಡಿದ್ದು ಬೇರೆ ಕಾರಣಕ್ಕಲ್ಲ, ಅವರ ಪ್ರತಿಭೆಗಾಗಿ. ಆ ಪಾತ್ರ ನಿಭಾಯಿಸುವುದು ಬಹಳ ಕಷ್ಟ. ಬಹಳ ನೈಜವಾಗಿ ಮತ್ತು ಸೆನ್ಸಿಬಲ್ ಆಗಿ ನಟಿಸಬೇಕಿತ್ತು. ನಿರೀಕ್ಷೆಗೂ ಮೀರಿ ಅವರು ಮಿಲನಾ ನಟಿಸಿದ್ದಾರೆ. ಬೃಂದಾ ಅವರ ಅಭಿನಯ ಕೂಡ ಅದ್ಭುತವಾಗಿದೆ.

ಚಿತ್ರದಲ್ಲಿ ನಾಗಭೂಷಣ ಮತ್ತು ಅಚ್ಯುತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇನ್ನು ಕೌರವ ಪ್ರೊಡಕ್ಷನ್ಸ್‌ ಬ್ಯಾನರ್‌ ಮತ್ತು ಶಶಾಂಕ್‌ ಸಿನಿಮಾಸ್‌ ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿವೆ. ಶಶಾಂಕ್ ಅವರು ಬಂದು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಮ್ಮ ಕೌರವ ಪ್ರೊಡಕ್ಷನ್ ಹೌಸ್ ಹಾಗೂ ಶಶಾಂಕ್ ಸಿನಿಮಾಸ್ ಜೊತೆ ಸೇರಿ ಈ ಚಿತ್ರ‌ ನಿರ್ಮಾಣ ಮಾಡಿದ್ದೇವೆ.‌ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT