ರಮ್ಯಾ 
ಸಿನಿಮಾ ಸುದ್ದಿ

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾಗೆ ರಮ್ಯಾ ತಕರಾರು: ಚಿತ್ರ ತಂಡಕ್ಕೆ ಲೀಗಲ್​ ನೋಟೀಸ್!

ಮೋಹಕ ತಾರೆ ರಮ್ಯಾ ಬಹು ವರ್ಷಗಳ ಬಳಿಕ ಕಮ್‌ಬ್ಯಾಕ್‌ ಆಗಿದ್ದನ್ನು ನೋಡಿ ಫ್ಯಾನ್ಸ್‌ ಸಖತ್‌ ಖುಷ್‌ ಆಗಿದ್ದರು. ಆದರೆ ಇದೀಗ ನಟಿ ರಮ್ಯಾ ಸಿನಿಮಾ ತಂಡಕ್ಕೆ ಲೀಗಲ್​ ನೋಟಿಸ್​ ಕಳುಹಿಸಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಒತ್ತಾಯಿಸಿದ್ದಾರೆ.

ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಟ್ರೈಲರ್‌ ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿತ್ತು. ರಮ್ಯಾ ಲೆಕ್ಚರರ್‌ ಪಾತ್ರದಲ್ಲಿ ಗಮನ ಸೆಳೆದಿದ್ದರು. ಮೋಹಕ ತಾರೆ ರಮ್ಯಾ ಬಹು ವರ್ಷಗಳ ಬಳಿಕ ಕಮ್‌ಬ್ಯಾಕ್‌ ಆಗಿದ್ದನ್ನು ನೋಡಿ ಫ್ಯಾನ್ಸ್‌ ಸಖತ್‌ ಖುಷ್‌ ಆಗಿದ್ದರು.

ಆದರೆ ಇದೀಗ ನಟಿ ರಮ್ಯಾ ಸಿನಿಮಾ ತಂಡಕ್ಕೆ ಲೀಗಲ್​ ನೋಟಿಸ್​ ಕಳುಹಿಸಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಒತ್ತಾಯಿಸಿದ್ದಾರೆ.

ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ ಎಂದು ಈಗ ರಮ್ಯಾ ಅವರು ತಕರಾರು ತೆಗೆದಿದ್ದಾರೆ. ತನ್ನ ಒಪ್ಪಿಗೆ ಇಲ್ಲದೇ ಯಾವ ದೃಶ್ಯ ಬಳಸಬಾರದು ಎಂದು ತಡೆಯಾಜ್ಞೆ ನೀಡಿದ್ದಾರೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೊ, ಸುದ್ದಿ ಮತ್ತಿತ್ತರ ಕಂಟೆಂಟ್​ಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಡಿಮ್ಯಾಂಡ್​ ಮಾಡಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟಿಸ್​ನಲ್ಲಿ ಒತ್ತಾಯಿಸಿದ್ದಾರೆ.

ಈಗ ಚಿತ್ರತಂಡಕ್ಕೆ ತಲೆ ನೋವಾಗಿ ಪರಿಣಮಿಸುವ ಸಾಧ್ಯತೆ ಇದೆ. ಜುಲೈ 21ರಂದು ಸಿನಿಮಾ ಬಿಡುಗಡೆಯಾಗಲು ಸಜ್ಜಾಗುತ್ತಿದೆ. ಅಷ್ಟೇ ಅಲ್ಲದೇ ರಮ್ಯಾ ಅವರು ಈ ಸಿನಿಮಾದ ಪ್ರೋಮೊ ಶೂಟ್​ನಲ್ಲಿ ಭಾಗಿ ಆಗಿದ್ದರು. ಕೊನೆಯ ಕ್ಷಣದಲ್ಲಿ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಸಡನ್‌ ಆಗಿ ಲೀಗಲ್‌ ನೋಟಿಸ್‌ ನೀಡಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಟ್ರೇಲರ್​ ಗಮನ ಸೆಳೆದಿದೆ. ಇದರಲ್ಲಿ ರಮ್ಯಾ, ರಿಷಬ್​ ಶೆಟ್ಟಿ, ದಿಗಂತ್​, ಪವನ್​ ಕುಮಾರ್ ಮುಂತಾದವರು ಕಾಣಿಸಿಕೊಂಡಿದ್ದಾರೆ. ಆದರೆ ಈ ಟ್ರೇಲರ್​ ಅನ್ನು ಯೂಟ್ಯೂಬ್​ ಮುಂತಾದ ಕಡೆಗಳಿಂದ ತೆಗೆದು ಹಾಕಬೇಕು ಎಂದು ಕೋರ್ಟ್​ ಆದೇಶಿಸಿದೆ ಎಂದು ಈ ಲೀಗಲ್​ ನೋಟೀಸ್​ನಲ್ಲಿ ತಿಳಿಸಲಾಗಿದೆ.

ನಿತಿನ್​ ಕೃಷ್ಣಮೂರ್ತಿ ಅವರು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿದ್ದಾರೆ. ಅರವಿಂದ್​ ಎಸ್​. ಕಶ್ಯಪ್​ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಅವರು ‘ಪರಂವಾ ಪಿಕ್ಚರ್ಸ್​’ ಮೂಲಕ ಬಿಡುಗಡೆ ಮಾಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT