ಅಪೂರ್ವಾ ಭಾರದ್ವಾಜ್ 
ಸಿನಿಮಾ ಸುದ್ದಿ

ಪಿ.ಸಿ.ಶೇಖರ್​ ನಿರ್ದೇಶನದ 'ಬ್ಯಾಡ್' ಚಿತ್ರಕ್ಕೆ ಅಪೂರ್ವಾ ಭಾರದ್ವಾಜ್ ಎಂಟ್ರಿ

ಕಿರುತೆರೆಯಲ್ಲಿ ನಟಿಸಿ ಜನರ ಮನಗೆದ್ದಿರುವ ನಟಿ ಅಪೂರ್ವ ಭಾರದ್ವಾಜ್ ಅವರು, ಪಿ.ಸಿ.ಶೇಖರ್​ ನಿರ್ದೇಶನದ 'ಬ್ಯಾಡ್' ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಕಿರುತೆರೆಯಲ್ಲಿ ನಟಿಸಿ ಜನರ ಮನಗೆದ್ದಿರುವ ನಟಿ ಅಪೂರ್ವ ಭಾರದ್ವಾಜ್ ಅವರು, ಪಿ.ಸಿ.ಶೇಖರ್​ ನಿರ್ದೇಶನದ 'ಬ್ಯಾಡ್' ಚಿತ್ರದಲ್ಲಿ ನಟಿಸುತ್ತಿದ್ದಾರೆ.

'ಬ್ಯಾಡ್' ಚಿತ್ರದಲ್ಲಿ ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಿದ್ದು, ಆ ಪೈಕಿ ಕಾಮ ಎಂಬ‌ ವರ್ಗವನ್ನು ಅನು ಎಂಬ ಪಾತ್ರದ ಮೂಲಕ ತೋರಿಸಲಾಗುತ್ತಿದೆ. ಈ ಪಾತ್ರದಲ್ಲಿ ಅಪೂರ್ವ ಭಾರದ್ವಾಜ್ ಕಾಣಿಸಿಕೊಳ್ಳುತ್ತಿದ್ದಾರೆ. ನಮ್ಮ ಚಿತ್ರದಲ್ಲಿ ಕಾಮವನ್ನು ಪ್ರೀತಿಗೆ ಬದಲಾಯಿಸಿ ತೋರಿಸಲಾಗುತ್ತಿದೆ ಎಂದು ನಿರ್ದೇಶಕ ಪಿಸಿ ಶೇಖರ್ ಅವರು ಹೇಳಿದ್ದಾರೆ.

ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡು, ತಂದೆಯ ಆಸರೆಯಲ್ಲಿ ಬೆಳೆದ ಹುಡುಗಿ ಅನು. ತಾಯಿ ಪ್ರೀತಿ ಕಾಣದ ಈ ಹುಡುಗಿಗೆ ಯಾರ ಬಳಿ ಹೇಗೆ ಪ್ರೀತಿ ವ್ಯಕ್ತಪಡಿಸಬೇಕೆಂದು ತಿಳಿದಿರುವುದಿಲ್ಲ. ಈ ಪಾತ್ರಕ್ಕೆ ಮಾತು ಕಡಿಮೆ. ಕಣ್ಣಿನಲ್ಲೇ ಭಾವನೆಗಳನ್ನು ಹೇಳುವ ಹಾಗೂ ಗುಂಗುರು ಕೂದಲುಳ್ಳ ಸಹಜ ಸುಂದರಿಯಂತೆ ಕಾಣುವ ಪಾತ್ರವಿದು.‌

ಹಾಗಾಗಿ ಅಪೂರ್ವ ಅವರ ಹಿಂದಿನ ಧಾರಾವಾಹಿ ಹಾಗೂ ಚಿತ್ರಗಳನ್ನು ನೋಡಿ, ಈ ಪಾತ್ರಕ್ಕೆ ಇವರೆ ಸರಿ ಹೊಂದುತ್ತಾರೆ ಎಂದು ಅಪೂರ್ವ ಅವರನ್ನು ಆಯ್ಕೆ ಮಾಡಿಕೊಂಡಿರುವುದಾಗಿ ತಿಳಿಸಿದರು.

ಅಪೂರ್ವ ಅವರು ಬಹಳ ಅದ್ಭುತವಾಗಿ ಅಭಿನಯಿಸಿದ್ದಾರೆ ಹಾಗೂ ಚಿತ್ರದಲ್ಲಿ ಅವರ ಪಾತ್ರ ಬರುವ ಕಡೆಯೆಲ್ಲಾ ಪಿಂಕ್ (ಗುಲಾಬಿ ಬಣ್ಣ) ಶೇಡ್‌ನಲ್ಲಿ ಚಿತ್ರಿಸಲಾಗಿದೆ ಎಂದು ಅನು ಪಾತ್ರದ ಕುರಿತು ಮಾಹಿತಿ ಹಂಚಿಕೊಂಡರು.

ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿದೆ. ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ ಸಂಭಾಷಣೆ ಬರೆದಿದ್ದರೆ, ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT