'ದಿ ಭವಾನಿ ಫೈಲ್ಸ್' ಎಂಬ ಶೀರ್ಷಿಕೆಯ ಫಸ್ಟ್ ಲುಕ್ ಪೋಸ್ಟರ್ ಮತ್ತು ಟೈಟಲ್ ಅನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಬುಧವಾರ ಬಿಡುಗಡೆ ಮಾಡಿದರು. 
ಸಿನಿಮಾ ಸುದ್ದಿ

ಮಲಯಾಳಂ ಸಿನಿಮಾ ಚಿತ್ರೀಕರಣ ಪೂರ್ಣ; ಕನ್ನಡದಲ್ಲಿ ಮುಂದಿನ ಚಿತ್ರ ಘೋಷಿಸಿದ ಆರ್ಯನ್

ಬಿಗ್ ಬಾಸ್ ಸ್ಪರ್ಧಿ ಮತ್ತು ನಟ ಆರ್ಯನ್, ಕೊನೆಯ ಚಿತ್ರ 'ಡಿಯರ್ ಸತ್ಯ'ದಲ್ಲಿನ ಅವರ ಪಾತ್ರಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ಚೊಚ್ಚಲ ಮಲಯಾಳಂ (ದಿಲೀಪ್-ಅರುಣ್ ಗೋಪಿ ಅವರ ಚಿತ್ರ) ಸಿನಿಮಾದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ ಮತ್ತು ಇದೀಗ ಕನ್ನಡದಲ್ಲಿ ತಮ್ಮ ಮುಂದಿನ ಯೋಜನೆಯನ್ನು ಘೋಷಿಸಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ಮತ್ತು ನಟ ಆರ್ಯನ್, ಕೊನೆಯ ಚಿತ್ರ 'ಡಿಯರ್ ಸತ್ಯ'ದಲ್ಲಿನ ಅವರ ಪಾತ್ರಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ಚೊಚ್ಚಲ ಮಲಯಾಳಂ (ದಿಲೀಪ್-ಅರುಣ್ ಗೋಪಿ ಅವರ ಚಿತ್ರ) ಸಿನಿಮಾದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ ಮತ್ತು ಇದೀಗ ಕನ್ನಡದಲ್ಲಿ ತಮ್ಮ ಮುಂದಿನ ಯೋಜನೆಯನ್ನು ಘೋಷಿಸಿದ್ದಾರೆ.

'ದಿ ಭವಾನಿ ಫೈಲ್ಸ್' ಎಂಬ ಶೀರ್ಷಿಕೆಯ ಫಸ್ಟ್ ಲುಕ್ ಪೋಸ್ಟರ್ ಮತ್ತು ಟೈಟಲ್ ಅನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಬುಧವಾರ ಬಿಡುಗಡೆ ಮಾಡಿದರು. ಸದ್ಯ 'ದಿ ಭವಾನಿ ಫೈಲ್ಸ್‌'ಗಾಗಿ ತಯಾರಿ ನಡೆಸುತ್ತಿರುವ ಆರ್ಯನ್, ಬಹು ಜವಾಬ್ದಾರಿಗಳನ್ನು ನಿರ್ವಹಿಸಲು ಮುಂದಾಗಿದ್ದಾರೆ. ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುವುದು ಮಾತ್ರವಲ್ಲದೆ ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಕಾರ್ಯನಿರ್ವಹಿಸಲಿದ್ದಾರೆ.

ಪ್ರಾಜೆಕ್ಟ್ ಕುರಿತು ಮಾತನಾಡುತ್ತಾ ಆರ್ಯನ್, 'ಈ ಚಿತ್ರವು 14ನೇ ಶತಮಾನದ 'ಥಗ್ಸ್' ಎಂದು ಕರೆಯಲ್ಪಡುವ ಆರಾಧನೆಯಿಂದ ಪ್ರೇರಿತವಾಗಿದೆ. ತಾನು ಮತ್ತು ಸ್ನೇಹಿತರ ಗುಂಪಿನೊಂದಿಗೆ ಇದನ್ನು ಬರೆಯುವ, ನಿರ್ದೇಶಿಸುವ ಮತ್ತು ನಿರ್ಮಾಣದ ಜವಾಬ್ದಾರಿಯನ್ನು ತೆಗೆದುಕೊಂಡಿದ್ದೇನೆ. ಚಿತ್ರಕಥೆಯನ್ನು ಮೋಹನ್ ಮೆನನ್, ಜೇಕಬ್ ವರ್ಗೀಸ್ ಮತ್ತು ಆರ್ಯನ್ ಬರೆದಿದ್ದಾರೆ. ಚೇತನ್ ಡಿಸೋಜಾ ಸಾಹಸ ಸಂಯೋಜನೆ ಮಾಡಲಾಗಿದ್ದರೆ, ಜೋ ಕೋಸ್ಟಾ ಸಂಗೀತ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಸಹಯೋಗದಲ್ಲಿ ವೈಟ್ ಹಾರ್ಸ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದೆ. ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ಯೋಜಿಸುತ್ತಿರುವುದರಿಂದ, ಉಳಿದ ತಾರಾಗಣ ಮತ್ತು ತಾಂತ್ರಿಕ ತಂಡದ ಕುರಿತು ಹೆಚ್ಚಿನ ವಿವರಗಳನ್ನು ನಿರ್ಮಾಣ ಕಂಪನಿಯು ಶೀಘ್ರದಲ್ಲೇ ಬಹಿರಂಗಪಡಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT