ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಕಿರುತೆರೆ ನಟನಿಗೆ ವಂಚನೆ: ನಟಿ ಉಷಾ ಬಂಧನ

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಉಷಾ ರವಿಶಂಕರ್
Vishwanath S
Updated On : 16 Jun 2023, 8:06 pm

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ನಟಿ ಉಷಾ ರವಿಶಂಕರ್ ಕಿರುತೆರೆ ನಟ ಶರವಣನ್ ಅವರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದರು. ಈ ಸಂಬಂಧ ನಟಿ ವಿರುದ್ಧ ಕೋರ್ಟ್ ನಲ್ಲಿ ಶರವಣನ್ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ನಟಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆ ವೇಳೆ ಕೋರ್ಟ್ ನಟಿ ಗೈರಾಗಿದ್ದರಿಂದ ಆಕೆಯ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ: 'ಆದಿಪುರುಷ' ರಾಮನ ಪಾತ್ರಕ್ಕಾಗಿ ಮದ್ಯ, ಮಾಂಸ ಸೇವನೆ ಬಿಟ್ಟ ನಟ ಪ್ರಭಾಸ್! 

Advertisement

Advertisement

ಕೋರ್ಟ್ ಆದೇಶದಂತೆ ನಟಿಯನ್ನು ಬಂಧಿಸಿರುವ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ನಟಿ ಉಷಾ ರವಿಶಂಕರ್ ಗೆ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ನಂತರ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು ಎನ್ನಲಾಗಿದೆ.

ಉಷಾ ರವಿಶಂಕರ್ ಕನ್ನಡದ ಒಂದಲ್ಲ ಎರಡು, ಸಲಗ ಚಿತ್ರಗಳು ಸೇರಿದಂತೆ ಹಲವು ಸಿನಿಮಾ ಹಾಗೂ ಕೆಲ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement