ಪ್ರಜ್ವಲ್ 
ಸಿನಿಮಾ ಸುದ್ದಿ

ಬೆಂಗಳೂರು: ಕುಡಿದು ಬಾರ್​​ನಲ್ಲಿ ಕಿರಿಕ್​; ಕಿರುತೆರೆ ನಟನ ವಿರುದ್ಧ ಎಫ್​​ಐಆರ್​ ದಾಖಲು

ಕಿರುತೆರೆ ನಟನೊಬ್ಬ ಬಾರ್​​ನಲ್ಲಿ ಕಂಠಪೂರ್ತಿ ಕುಡಿದು ಅಮಲೇರಿಸಿಕೊಂಡು ಕಿರಿಕ್​ ಮಾಡಿದ್ದಾರೆ. ಇವರ ವಿರುದ್ಧ ಈಗ ಬೆಂಗಳೂರಿನ ಆರ್​ಆರ್​ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಕಿರುತೆರೆ ನಟನೊಬ್ಬ ಬಾರ್​​ನಲ್ಲಿ ಕಂಠಪೂರ್ತಿ ಕುಡಿದು ಅಮಲೇರಿಸಿಕೊಂಡು ಕಿರಿಕ್​ ಮಾಡಿದ್ದಾರೆ. ಇವರ ವಿರುದ್ಧ ಈಗ ಬೆಂಗಳೂರಿನ ಆರ್​ಆರ್​ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜ್ವಲ್ ಎಂಬ ನಟನ ವಿರುದ್ಧ ದೂರು ದಾಖಲಾಗಿದೆ. ಈ ಹಿಂದೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅಮೃತ ವರ್ಷಿಣಿಯಲ್ಲಿ ಅಭಿನಯಿಸಿದ್ದರು. ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಅಣ್ಣ-ತಂಗಿ ಧಾರಾವಾಹಿಯಲ್ಲಿ ಇವರು ಇಂದ್ರನ ಪಾತ್ರ ನಿರ್ವಹಿಸುತ್ತಿದ್ದಾರೆ.

ಆರ್​ಆರ್ ನಗರದ ‘ಅಮೃತ ಬಾರ್ ಆ್ಯಂಡ್ ರೆಸ್ಟೋರೆಂಟ್’ನಲ್ಲಿ ಈ ಗಲಾಟೆ ನಡೆದಿದೆ. ಪ್ರಜ್ವಲ್ ತಮ್ಮ ಸ್ನೇಹಿತರ ಜೊತೆ ಅಮೃತ ಬಾರ್​ಗೆ ಹೋಗಿದ್ದರು. ಇದೇ ಬಾರ್​ಗೆ ಚೇತನ್ ಕೂಡ ತನ್ನ ಸ್ನೇಹಿತರ ಜೊತೆ ಬಂದಿದ್ದರು. ಈ ವೇಳೆ ಪ್ರಜ್ವಲ್​ನ ಸ್ನೇಹಿತ ಮನು ಎಂಬುವವರನ್ನು ಚೇತನ್ ಕರೆದಿದ್ದಾರೆ. ಇದರಿಂದ ಅಲ್ಲಿಯೇ ಇದ್ದ ಪ್ರಜ್ವಲ್ ಅವರು ಚೇತನ್ ಮೇಲೆ ಹಲ್ಲೆ ಮಾಡಿದ್ದಾರೆ. ಚೇತನ್  ನೀಡಿದ ದೂರನ್ನು ಆಧರಿಸಿ, ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮರದ ಪೀಸ್​​​ನಿಂದ ಚೇತನ್ ಹಾಗೂ ಸ್ನೇಹಿತರ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದ ಆರೋಪವನ್ನು ಚೇತನ್ ಮಾಡಿದ್ದಾರೆ. ಬಾರ್​ನಲ್ಲಿ ಅಷ್ಟೇ ಅಲ್ಲದೆ ರಸ್ತೆಯಲ್ಲಿ ಈ ಗುಂಪು ಮತ್ತೆ ಗಲಾಟೆ ಮಾಡಿಕೊಂಡಿದೆ. ಅಮೃತ ಬಾರ್​​ನಲ್ಲಿ ಗಲಾಟೆ ಆದ ಬಳಿಕ ಚೇತನ್ ಸ್ನೇಹಿತರ ಮೇಲೆ ಪ್ರಜ್ವಲ್ ಮತ್ತೆ ಹಲ್ಲೆ ಮಾಡಿದ್ದಾಗಿ ಆರೋಪಿಸಿ ದೂರು ದಾಖಲಾಗಿದೆ.

ಸದ್ಯ ಚೇತನ್ ಕೊಟ್ಟು ದೂರಿನನ್ವಯ ಎಫ್​ಐಆರ್​ ದಾಖಲು ಮಾಡಿಕೊಂಡು ಪೊಲೀಸರು‌‌ ನೊಟೀಸ್ ನೀಡಿದ್ದಾರೆ. ಇದರ ಜೊತೆಗೆ ಬಾರ್​​ನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT