ಕ್ಯಾಪ್ಟನ್ ಮಿಲ್ಲರ್ ಚಿತ್ರದಲ್ಲಿ ನಟ ಶಿವರಾಜ್‌ಕುಮಾರ್ 
ಸಿನಿಮಾ ಸುದ್ದಿ

ಧನುಷ್ ನಟನೆಯ 'ಕ್ಯಾಪ್ಟನ್ ಮಿಲ್ಲರ್' ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿದ ನಟ ಶಿವರಾಜ್‌ಕುಮಾರ್!

ರಜಿನಿಕಾಂತ್ ಅಭಿನಯದ ಜೈಲರ್ ಚಿತ್ರದ ಮೂಲಕ ಶಿವರಾಜಕುಮಾರ್ ತಮಿಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂದು ಈ ಹಿಂದೆ ಘೋಷಿಸಲಾಗಿತ್ತು. ಈಮಧ್ಯೆ, ಧನುಷ್ ಅಭಿನಯದ 'ಕ್ಯಾಪ್ಟನ್ ಮಿಲ್ಲರ್‌' ಚಿತ್ರದ ಭಾಗವಾಗಿದ್ದ ಶಿವರಾಜ್‌ಕುಮಾರ್, ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. 

ರಜಿನಿಕಾಂತ್ ಅಭಿನಯದ ಜೈಲರ್ ಚಿತ್ರದ ಮೂಲಕ ಶಿವರಾಜಕುಮಾರ್ ತಮಿಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂದು ಈ ಹಿಂದೆ ಘೋಷಿಸಲಾಗಿತ್ತು. ಈಮಧ್ಯೆ, ಧನುಷ್ ಅಭಿನಯದ 'ಕ್ಯಾಪ್ಟನ್ ಮಿಲ್ಲರ್‌' ಚಿತ್ರದ ಭಾಗವಾಗಿದ್ದ ಶಿವರಾಜ್‌ಕುಮಾರ್, ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ನಟ ಆರು ತಿಂಗಳು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.

ಈ ಚಿತ್ರವನ್ನು ರಾಕಿ ಖ್ಯಾತಿಯ ಅರುಣ್ ಮಾಥೇಶ್ವರನ್ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಧನುಷ್ ಅವರ ಅಣ್ಣನಾಗಿ ಶಿವರಾಜಕುಮಾರ್ ನಟಿಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಇನ್ನುಳಿದಂತೆ, ಪ್ರಿಯಾಂಕಾ ಮೋಹನ್, ಸಂದೀಪ್ ಕಿಶನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಡೇನಿಯಲ್ ಬಾಲಾಜಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರತಂಡ ಜುಲೈ 28 ರಂದು ಧನುಷ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಫಸ್ಟ್-ಲುಕ್ ಟೀಸರ್ ಅನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಚಿತ್ರವು ಅಕ್ಟೋಬರ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದ್ದರೂ, ಬಿಡುಗಡೆ ದಿನಾಂಕದ ದೃಢೀಕರಣ ಇನ್ನೂ ಬರಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

New Year 2026: ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು; ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ

ಚಿತ್ರದುರ್ಗ ಬಸ್ ದುರಂತ: DNA ವರದಿ ಆಧರಿಸಿ ಕುಟುಂಬಗಳಿಗೆ ಮೃತದೇಹ ಹಸ್ತಾಂತರ

'ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿದ್ದಾರೆ: ಮುಕ್ಕಾಲು ಪ್ರಪಂಚ ಗೆದ್ದ ಅಲೆಕ್ಸಾಂಡರ್ ಶಾಶ್ವತ ಇರಲಿಲ್ಲ, ಸದ್ದಾಂ ಹುಸೇನ್ ಅವಿತುಕೊಂಡ'

ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ: ಕಾರವಾರ Airport ನಿರ್ಮಾಣಕ್ಕೆ ಆದ್ಯತೆ; ಡಿಕೆ ಶಿವಕುಮಾರ್

ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿಯಾಗಿರಲಿಲ್ಲ, ಮರಾಠಾ ಸಮಾಜವನ್ನು ಬಲಿಷ್ಠವಾಗಿ ಕಟ್ಟುವ ಹಂಬಲವಿದೆ: ಸಚಿವ ಸಂತೋಷ ಲಾಡ್

SCROLL FOR NEXT