ಆದಿತ್ಯ - ರಂಜನಿ ರಾಘವನ್ 
ಸಿನಿಮಾ ಸುದ್ದಿ

ಡೆಡ್ಲಿ ಸೋಮ ಖ್ಯಾತಿಯ ನಟ ಆದಿತ್ಯ ಸಿನಿಮಾಗೆ ಕಿರುತೆರೆಯ ಖ್ಯಾತ ನಟಿ ರಂಜನಿ ರಾಘವನ್ ನಾಯಕಿ!

ಡೆಡ್ಲಿ ಸೋಮ ಸಿನಿಮಾ ಖ್ಯಾತಿಯ ಆದಿತ್ಯ ಅವರು ತಮ್ಮ ಮುಂದಿನ ಯೋಜನೆ ಸಸ್ಪೆನ್ಸ್ ಥ್ರಿಲ್ಲರ್‌ಗೆ ಸಹಿ ಹಾಕಿದ್ದಾರೆ. ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣವನ್ನು ನಟ ಸದ್ದಿಲ್ಲದೆ ಪ್ರಾರಂಭಿಸಿದ್ದಾರೆ. ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಿಶೋರ್ ಮೇಗಳಮನೆ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. 

ಡೆಡ್ಲಿ ಸೋಮ ಸಿನಿಮಾ ಖ್ಯಾತಿಯ ಆದಿತ್ಯ ಅವರು ತಮ್ಮ ಮುಂದಿನ ಯೋಜನೆ ಸಸ್ಪೆನ್ಸ್ ಥ್ರಿಲ್ಲರ್‌ಗೆ ಸಹಿ ಹಾಕಿದ್ದಾರೆ. ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣವನ್ನು ನಟ ಸದ್ದಿಲ್ಲದೆ ಪ್ರಾರಂಭಿಸಿದ್ದಾರೆ. ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಿಶೋರ್ ಮೇಗಳಮನೆ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಅಲ್ಲದೆ, ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ಬರೆದಿದ್ದಾರೆ.

ಈ ಯೋಜನೆಗೆ ಹಣ ಹೂಡಲು ಹೂಡಿಕೆದಾರರ ಗುಂಪು ಒಟ್ಟಾಗಿ ಬರುತ್ತಿದ್ದು, ಕೇವಲ ಹದಿನೇಳು ದಿನಗಳಲ್ಲಿ ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿ ಕೆಲವು ಪ್ರಮುಖ ದೃಶ್ಯಗಳ ಚಿತ್ರೀಕರಣವನ್ನು ಈಗಾಗಲೇ ತಂಡವು ಪೂರ್ಣಗೊಳಿಸಿದೆ.

ಪುಟ್ಟಗೌರಿ ಮದುವೆ, ಕನ್ನಡತಿ ಮುಂತಾದ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿರುವ ರಂಜನಿ ರಾಘವನ್ ಅವರು ಇದೇ ಮೊದಲ ಬಾರಿಗೆ ಆದಿತ್ಯ ಅವರೊಂದಿಗೆ ನಾಯಕಿಯಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ. 

ಚಿತ್ರಕ್ಕೆ ಶಶಾಂಕ್ ಶೇಷಗಿರಿ ಸಂಗೀತ ನೀಡಲಿದ್ದು, ಉದಯ ಲೀಲಾ ಅವರ ಛಾಯಾಗ್ರಹಣವಿದೆ. ಅರ್ಜುನ್ ಕಿಟ್ಟು ಸಂಕಲನದ ಹೊಣೆ ಹೊತ್ತಿದ್ದಾರೆ. ತಾರಾಗಣದಲ್ಲಿ ಶಿವಮಣಿ, ಅಶ್ವಿನ್ ಹಾಸನ್, ಕರಿಸುಬ್ಬು ಮತ್ತು ಇತರರು ಇದ್ದಾರೆ. ಚಿತ್ರವು ಚಿತ್ರೀಕರಣದ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಚಿತ್ರದ ಶೀರ್ಷಿಕೆ ಮತ್ತು ಇತರ ವಿವರಗಳನ್ನು ಚಿತ್ರತಂಡ ಬಹಿರಂಗಪಡಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ