ಅರ್ಜುನ್ ಸರ್ಜಾ ಮತ್ತು ಐಶ್ವರ್ಯಾ ಸರ್ಜಾ 
ಸಿನಿಮಾ ಸುದ್ದಿ

ನಟ ಅರ್ಜುನ್ ಸರ್ಜಾ ಪುತ್ರಿ ವಿವಾಹ ಫಿಕ್ಸ್? ಹಾಸ್ಯ ನಟನ ಪುತ್ರನ ಜತೆ ಐಶ್ವರ್ಯಾ ಸಪ್ತಪದಿ!

ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಖ್ಯಾತ ಹಾಸ್ಯನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದ್ದು, ಈ ಸುದ್ದಿ ಕಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ.

ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಖ್ಯಾತ ಹಾಸ್ಯನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದ್ದು, ಈ ಸುದ್ದಿ ಕಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ.

ಅರ್ಜುನ್ ಸರ್ಜಾ ಮೊದಲ ಪುತ್ರಿ ಐಶ್ವರ್ಯಾ ಮದುವೆ ಮ್ಯಾಟರ್ ಜೋರಾಗಿಯೇ ಹರಿದಾಡುತ್ತಿದೆ. ಐಶ್ವರ್ಯಾ ಅರ್ಜುನ್ ಹಾಗೂ ಉಮಾಪತಿ ರಾಮಯ್ಯ ಇಬ್ಬರೂ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ. ಈಗ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದು, ಮದುವೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. ಈ ಜೋಡಿ ಸಾಕಷ್ಟು ಸಮಯದಿಂದ ಡೇಟಿಂಗ್ ನಡೆಸುತ್ತಿತ್ತು. ಇಬ್ಬರ ಮನೆಯಲ್ಲಿ ಮದುವೆ ಮಾತುಕತೆ ನಡೆದಿದೆ ಎಂದು ಕನಕರಾಜ್ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಐಶ್ವರ್ಯ ಸರ್ಜಾ

ಅರ್ಜುನ್ ಸರ್ಜಾ ಹಾಗೂ ಹಿರಿಯ ಹಾಸ್ಯ ನಟ ತಂಬಿ ರಾಮಯ್ಯ ಇಬ್ಬರೂ ಮಕ್ಕಳ ಮದುವೆಗೆ ಅಸ್ತು ಎಂದಿದ್ದಾರೆ. ಯಾವುದೇ ಸಂದರ್ಭದಲ್ಲಾದರೂ ಈ ಖುಷಿ ವಿಷಯವನ್ನು ತಮ್ಮ ಅಭಿಮಾನಿಗಳಿಗೆ ತಿಳಿಸಬಹುದು ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಎರಡೂ ಕುಟುಂಬಗಳು ಅಧಿಕೃತವಾಗಿ ಈ ಬಗ್ಗೆ ಮಾಹಿತಿ ನೀಡಿಲ್ಲ.

80-90ರ ದಶಕದ ಪ್ರಮುಖ ನಾಯಕರಲ್ಲಿ ಒಬ್ಬರಾದ ಅರ್ಜುನ್ ಸರ್ಜಾ ಬಹುಭಾಷಾ ನಟ. 1998ರಲ್ಲಿ ಆಶಾ ರಾಣಿ ಅವರನ್ನು ವಿವಾಹವಾದರು. ಇವರಿಗೆ ಐಶ್ವರ್ಯ ಮತ್ತು ಅಂಜನಾ ಇಬ್ಬರು ಪುತ್ರಿಯರು. ʼಪ್ರೇಮ ಬರಹʼ ಸಿನಿಮಾ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಐಶ್ವರ್ಯ ಸರ್ಜಾ ಪದಾರ್ಪಣೆ ಮಾಡಿದರು.

ಉಮಾಪತಿ ರಾಮಯ್ಯ

ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಜತೆಗೆ ಐಶ್ವರ್ಯ ತೆರೆ ಹಂಚಿಕೊಳ್ಳಲಿದ್ದಾರೆ. ಇದು ತೆಲುಗು ಸಿನಿಮಾವಾಗಿದೆ. ಅರ್ಜುನ್ ಸರ್ಜಾ ನಿರ್ಮಾಣ ಹಾಗೂ ನಿರ್ದೇಶನವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT