ನಟ ದಿಗಂತ್. 
ಸಿನಿಮಾ ಸುದ್ದಿ

ಹಾಸ್ಟೆಲ್ ಹುಡುಗರ ಜೊತೆಗೂಡಿದ ‘ದೂದ್ ಪೇಡಾ’ ದಿಗಂತ್

ಬರಹಗಾರ-ನಿರ್ದೇಶಕ ನಿತಿನ್ ಕೃಷ್ಣಮೂರ್ತಿ ಅವರ ನಿರ್ದೇಶನದ ಬಹುನಿರೀಕ್ಷಿತ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಚಿತ್ರ ಸಿನಿಪ್ರಿಯರ ಗಮನ ಸಳೆಯುತ್ತಿದ್ದು, ಚಿತ್ರತಂಡಕ್ಕೆ ದೂದ್ ಪೇಟಾ ಖ್ಯಾತಿಯ ದಿಗಿಂತ್ ಅವರು ಸಾಥ್ ನೀಡಿದ್ದಾರೆ.

ಬರಹಗಾರ-ನಿರ್ದೇಶಕ ನಿತಿನ್ ಕೃಷ್ಣಮೂರ್ತಿ ಅವರ ನಿರ್ದೇಶನದ ಬಹುನಿರೀಕ್ಷಿತ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಚಿತ್ರ ಸಿನಿಪ್ರಿಯರ ಗಮನ ಸಳೆಯುತ್ತಿದ್ದು, ಚಿತ್ರತಂಡಕ್ಕೆ ದೂದ್ ಪೇಟಾ ಖ್ಯಾತಿಯ ದಿಗಿಂತ್ ಅವರು ಸಾಥ್ ನೀಡಿದ್ದಾರೆ.

ದಿ. ಪುನೀತ್ ರಾಜ್‌ಕುಮಾರ್, ರಮ್ಯಾ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಶೈನ್​ ಶೆಟ್ಟಿ, ಪವನ್ ಕುಮಾರ್ ಬೆಂಬಲ ಕೊಟ್ಟಿರುವ ಚಿತ್ರದಲ್ಲಿ ದಿಗಂತ್​​ ಬಣ್ಣ ಹಚ್ಚಿದ್ದಾರೆ. ಆದರೆ, ಅವರ ಪಾತ್ರವೇನೆಂಬುದನ್ನು ಚಿತ್ರತಂಡ ಸಸ್ಪೆನ್ಸ್ ಆಗಿಟ್ಟಿದೆ. ಜುಲೈ 7ಕ್ಕೆ ದಿಗಂತ್ ಲುಕ್ ರಿವೀಲ್ ಮಾಡಲು ಚಿತ್ರತಂಡ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದು, ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಚಿತ್ರಕ್ಕೆ ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮ್ಸ್ ಬ್ಯಾನರ್ ಅಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ. ಕಶ್ಯಪ್ ಬಂಡವಾಳ ಹೂಡಿದ್ದಾರೆ.

ಪ್ರತಿ ಬಾರಿ ಯೂನಿಕ್ ಕಾನ್ಸೆಪ್ಟ್​​ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಕರ್ನಾಟಕದಾದ್ಯಂತ ಸುಮಾರು 7000 ನಟ ನಟಿಯರನ್ನು ಆಡಿಷನ್‌ ಮಾಡಿ, ಚಿತ್ರದ ಮೂಲಕ 100 ಹೊಸ ಪ್ರತಿಭೆಗಳನ್ನು ಚಿತ್ರತಂಡ ಪರಿಚಯಿಸುತ್ತಿದೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಸಿನಿಮಾ ಜುಲೈ ತಿಂಗಳಿನಲ್ಲಿ ತೆರೆಗೆ ಬರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT