ಪ್ರಣಯಂ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಮುಂದಿನ ತಿಂಗಳು ತೆರೆಗೆ ಬರಲಿದೆ 'ಪ್ರಣಯಂ'

ಬಿಚ್ಚುಗತ್ತಿ ಚಾಪ್ಟರ್ 1 ಖ್ಯಾತಿಯ ರಾಜವರ್ದನ್ ನಟಿಸಿರುವ ಹಾಗೂ ದತ್ತಾತ್ರೇಯ ನಿರ್ದೇಶನದ ಪ್ರಣಯಂ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಈಗ ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. 

ಬಿಚ್ಚುಗತ್ತಿ ಚಾಪ್ಟರ್ 1 ಖ್ಯಾತಿಯ ರಾಜವರ್ದನ್ ನಟಿಸಿರುವ ಹಾಗೂ ದತ್ತಾತ್ರೇಯ ನಿರ್ದೇಶನದ ಪ್ರಣಯಂ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಈಗ ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಬೋಲ್ಡ್‌ ಆಗಿ ಕಾಣಿಸಿಕೊಂಡಿರುವ ನೈನಾ ಗಂಗೂಲಿ ಅವರ ಚೊಚ್ಚಲ ಕನ್ನಡ ಚಿತ್ರ ಪ್ರಣಯಂ ಏಪ್ರಿಲ್‌ನಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಬಿಡುಗಡೆಯ ಹಂತಕ್ಕೆ ಬಂದಿದೆ. 

ಹೊಸದಾಗಿ ನಿಶ್ಚಿತಾರ್ಥ ಮಾಡಿಕೊಂಡ ನವಜೋಡಿಗಳ ನಡುವಿನ ಪ್ರೀತಿ ಪ್ರೇಮದ ಕಥೆಯಿದಾಗಿದ್ದು,  ಯುವ ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ. 

ನೈನಾ ಗಂಗೂಲಿ, ರಾಜವರ್ದನ್

ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ರಾಜವರ್ದನ್ ಅವರು, ರೊಮ್ಯಾಂಟಿಕ್ ಸಬ್ಜೆಕ್ಟ್‌ಗಾಗಿ ಹುಡುಕುತ್ತಿರುವಾಗ ಈ ಪ್ರಣಯಂ ಸಿಕ್ಕಿತು. ಇದುವರೆಗೂ ಆಕ್ಷನ್ ಚಿತ್ರಗಳನ್ನೇ ಮಾಡುತ್ತಿದ್ದೆ. ಈ ಚಿತ್ರದಲ್ಲಿ ಒಬ್ಬ ಲವರ್ ಬಾಯ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು.

ಹಿರಿಯ ಸಂಗೀತ ಸಂಯೋಜಕ ಮನೋಮೂರ್ತಿ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ನಾಗೇಶ್ ಆಚಾರ್ಯ ಛಾಯಾಗ್ರಹಣ ಮಾಡುತ್ತಿದ್ದಾರೆ. ಪರಮೇಶ್ ಈ ಚಿತ್ರದ ನಿರ್ಮಾಪಕರಾಗಿದ್ದು, ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ಡಬ್ ಮಾಡಲು ನೋಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!