ಕಬ್ಜ ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ಕನ್ನಡದಲ್ಲಷ್ಟೇ ಅಲ್ಲ, ತಮಿಳು, ಮಲಯಾಳಂ, ತೆಲುಗಿನಲ್ಲೂ ಕಬ್ಜ ಸಿನಿಮಾಗೆ ಭಾರಿ ಬೇಡಿಕೆ

ನಿರ್ದೇಶಕ ಆರ್ ಚಂದ್ರು ಅವರ ಕಬ್ಜಾದ ಪ್ರೀ-ರಿಲೀಸ್ ಕಾರ್ಯಕ್ರಮ ಕನ್ನಡದಲ್ಲಿ ಮಾತ್ರವಲ್ಲದೆ ಇತರ ಭಾಷೆಗಳಲ್ಲಿಯೂ ಭಾರಿ ಕ್ರೇಜ್ ಹುಟ್ಟುಹಾಕಿದೆ. ಉಪೇಂದ್ರ ಅಭಿನಯದ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಸುದೀಪ್ ಮತ್ತು ಶಿವರಾಜಕುಮಾರ್ ಕೂಡ ನಟಿಸಿದ್ದಾರೆ. ಇದು ದೇಶದಾದ್ಯಂತ ದೊಡ್ಡ ವಿತರಕರಿಂದ ಬಿಡುಗಡೆಯಾಗುತ್ತಿದೆ.

ನಿರ್ದೇಶಕ ಆರ್ ಚಂದ್ರು ಅವರ ಕಬ್ಜಾದ ಪ್ರೀ-ರಿಲೀಸ್ ಕಾರ್ಯಕ್ರಮ ಕನ್ನಡದಲ್ಲಿ ಮಾತ್ರವಲ್ಲದೆ ಇತರ ಭಾಷೆಗಳಲ್ಲಿಯೂ ಭಾರಿ ಕ್ರೇಜ್ ಹುಟ್ಟುಹಾಕಿದೆ. ಉಪೇಂದ್ರ ಅಭಿನಯದ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಸುದೀಪ್ ಮತ್ತು ಶಿವರಾಜಕುಮಾರ್ ಕೂಡ ನಟಿಸಿದ್ದಾರೆ. ಇದು ದೇಶದಾದ್ಯಂತ ದೊಡ್ಡ ವಿತರಕರಿಂದ ಬಿಡುಗಡೆಯಾಗುತ್ತಿದೆ.

ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಕಬ್ಜಾದ ಹಿಂದಿ ಆವೃತ್ತಿಯನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡಲಿದೆ ಎಂದು ನಾವು ಈ ಮೊದಲೇ ವರದಿ ಮಾಡಿದ್ದೇವೆ. ಇದೀಗ ಸುಧಾಕರ್ ರೆಡ್ಡಿ ಮತ್ತು ಬಾಂಬೆ ರಮೇಶ್ ಅವರು ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ವಿತರಣೆಯನ್ನು ನೋಡಿಕೊಳ್ಳುತ್ತಿದ್ದಾರೆ.

ಹೊಸ ವಿಚಾರವೆಂದರೆ, ಲೈಕಾ ಪ್ರೊಡಕ್ಷನ್ ತಮಿಳು ಆವೃತ್ತಿಯನ್ನು ವಿತರಿಸುವ ಜವಾಬ್ದಾರಿಯನ್ನು ತೆಗೆದುಕೊಂಡಿದೆ. ಈ ಕುರಿತು ಪ್ರಕಟಣೆ ನೀಡಿರುವ ನಿರ್ಮಾಣ ಸಂಸ್ಥೆಯು, 'ಈ ವಿಚಾರವನ್ನು ಘೋಷಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ. ಸುಬಾಸ್ಕರನ್ ತಮಿಳುನಾಡಿನಾದ್ಯಂತ ಕಬ್ಜ ಸಿನಿಮಾವನ್ನು ಹೆಮ್ಮೆಯಿಂದ ಪ್ರಸ್ತುತಪಡಿಸುತ್ತಾರೆ. ಮಾರ್ಚ್ 17 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ' ಎಂದಿದೆ.

ಈಮಧ್ಯೆ, ಎಂಟಿಬಿ ನಾಗರಾಜ್ ಪ್ರಸ್ತುತಪಡಿಸಿದ ಮತ್ತು ಸಿದ್ಧೇಶ್ವರ ಎಂಟರ್‌ಪ್ರೈಸಸ್ ಅಡಿಯಲ್ಲಿ ಚಂದ್ರು ನಿರ್ಮಿಸಿರುವ ಚಿತ್ರವನ್ನು ಅಲಂಕಾರ್ ಪಾಂಡಿಯನ್ ಸಹಯೋಗದಲ್ಲಿ ರಮೇಶ್ ವ್ಯಾಸ್ ಒಡೆತನದ ಪ್ರಸಿದ್ಧ ನಿರ್ಮಾಣ ಸಂಸ್ಥೆ ಎಲ್‌ಜಿಎಫ್ ಸ್ಟುಡಿಯೋಸ್ ಮಲಯಾಳಂನಲ್ಲಿ ವಿತರಿಸಲಿದೆ.

ಸ್ಯಾಂಡಲ್‌ವುಡ್ ಮಾರುಕಟ್ಟೆಯು ಸದ್ದು ಮಾಡುತ್ತಿದೆ. ಏಕೆಂದರೆ, ಚಿತ್ರವು ಬಿಡುಗಡೆಗೆ ಮುನ್ನವೇ ಡಿಜಿಟಲ್ ಮತ್ತು ಸ್ಯಾಟಲೈಟ್ ಹಕ್ಕುಗಳ ರೂಪದಲ್ಲಿ ಎಲ್ಲಾ ಭಾಷೆಗಳಲ್ಲಿ100 ಕೋಟಿ ಗಳಿಸುವ ಮೂಲಕ ದಾಖಲೆ ಸೃಷ್ಟಿಸಿದೆ. ಆದಾಗ್ಯೂ, ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ದೃಢೀಕರಣವನ್ನು ನಿರೀಕ್ಷಿಸಲಾಗುತ್ತಿದೆ.

ಬಹು ನಿರೀಕ್ಷಿತ ಚಿತ್ರದಲ್ಲಿ ಶ್ರೀಯಾ ಶರಣ್ ನಾಯಕಿಯಾಗಿ, ಅನೂಪ್ ರೇವಣ್ಣ, ಪ್ರಮೋದ್ ಶೆಟ್ಟಿ, ಮುರಳಿ ಶರ್ಮಾ, ಕಬೀರ್ ದುಹಾನ್ ಸಿಂಗ್, ಜಯಪ್ರಕಾಶ್ ಮತ್ತು ಕೋಟಾ ಶ್ರೀನಿವಾಸ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಕಬ್ಜ ಸಿನಿಮಾದ ತಾಂತ್ರಿಕ ತಂಡದಲ್ಲಿ ಕ್ಯಾಮೆರಾದ ಹಿಂದೆ ಎಜೆ ಶೆಟ್ಟಿ ಮತ್ತು ಸಂಕಲನಕಾರರಾಗಿ ಮಹೇಶ್ ಎಸ್ ರೆಡ್ಡಿ ಮತ್ತು ಸಂಗೀತ ನಿರ್ದೇಶಕರಾಗಿ ರವಿ ಬಸ್ರೂರ್ ಅವರನ್ನು ಒಳಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT