ಪ್ರಭುತ್ವ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಮತದಾನದ ಮಹತ್ವವನ್ನು ತಿಳಿಸಲು ಬರುತ್ತಿದೆ ಚೇತನ್ ಚಂದ್ರ ಅಭಿನಯದ 'ಪ್ರಭುತ್ವ'

'ಪ್ರಭುತ್ವ' ಚಿತ್ರದಲ್ಲಿ ಚೇತನ್ ಚಂದ್ರ ನಾಯಕನಾಗಿ ನಟಿಸುತ್ತಿದ್ದು, ಕರ್ನಾಟಕ ಚುನಾವಣೆಯ ಹೊಸ್ತಿಲಲ್ಲಿ ಚಿತ್ರಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸುತ್ತಿದ್ದಾರೆ.

'ಪ್ರಭುತ್ವ' ಚಿತ್ರದಲ್ಲಿ ಚೇತನ್ ಚಂದ್ರ ನಾಯಕನಾಗಿ ನಟಿಸುತ್ತಿದ್ದು, ಕರ್ನಾಟಕ ಚುನಾವಣೆಯ ಹೊಸ್ತಿಲಲ್ಲಿ ಚಿತ್ರಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸುತ್ತಿದ್ದಾರೆ

ಮೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಚಿತ್ರತಂಡ ಆಗಲೇ ಚಿತ್ರಬಿಡುಗಡೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ರಂಗನಾಥ್ ನಿರ್ದೇಶನದ ಈ ಚಿತ್ರ ಮತದಾನದ ಮಹತ್ವವನ್ನು ತಿಳಿಸುತ್ತದೆ ಮತ್ತು ಅದನ್ನು ಚಿತ್ರದ ಟ್ರೈಲರ್ ಮೂಲಕ ಹೊರತರಲಾಗಿದೆ. ಟ್ರೈಲರ್‌ ಅನ್ನು ರಾಜಕೀಯ ನಾಯಕ ರವೀಂದ್ರ ಬಿಡುಗಡೆ ಮಾಡಿದರು. ಜೇಂಕಾರ್ ಮ್ಯೂಸಿಕ್‌ ವೇದಿಕೆಯಲ್ಲಿ ಹೊರಬಂದಿದೆ.

ರವಿರಾಜ್ ಎಸ್ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಅವರ ತಂದೆ ಡಾ ಶಿವಕುಮಾರ್ ಕಥೆ ಬರೆದಿದ್ದಾರೆ. ಗೌಳಿ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಪವನಗೌಡ ಅವರಿಗೆ ಚಿತ್ರದಲ್ಲಿ ಮತ್ತೊಂದು ವಿಶಿಷ್ಟ ಪಾತ್ರವಿದೆ. ಅರವಿಂದ್ ರಾವ್, ಹರೀಶ್ ರಾಯ್, ಆದಿ ಲೋಕೇಶ್, ಶರತ್ ಲೋಹಿತಾಶ್ವ, ಆದಿ ಲೋಕೇಶ್, ಅರವಿಂದ್ ರಾವ್, ವಿಜಯ್ ಚೆಂಡೂರ್, ವೀಣಾ ಸುಂದರ್ ಮತ್ತು ಅನಿತಾ ಭಟ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

ಚಿತ್ರವು ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದೆ ಮತ್ತು ಚಿತ್ರ ನಿರ್ಮಾಪಕರು ಚುನಾವಣೆಗೂ ಮೊದಲು ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್