ಕಿಶೋರ್ ಕುಮಾರ್ 
ಸಿನಿಮಾ ಸುದ್ದಿ

ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ; ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ?: ಕಿಶೋರ್ ಕುಮಾರ್

ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಯಾರ ಬಗ್ಗೆಯೂ ಇಷ್ಟು ಚರ್ಚೆಯಾಗಿಲ್ಲ. ಇತಿಹಾಸದಲ್ಲಿ ನಿಜವಾಗಿಯೂ ಇಂಥ ವ್ಯಕ್ತಿಗಳಿದ್ದರೂ ಅಥವಾ ಕಾಲ್ಪನಿಕ ಪಾತ್ರಗಳೋ  ಎನ್ನುವುದು ಕೂಡ ಇನ್ನೂ ಬಗೆಹರಿದಿಲ್ಲ.

ಬೆಂಗಳೂರು: ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಯಾರ ಬಗ್ಗೆಯೂ ಇಷ್ಟು ಚರ್ಚೆಯಾಗಿಲ್ಲ. ಇತಿಹಾಸದಲ್ಲಿ ನಿಜವಾಗಿಯೂ ಇಂಥ ವ್ಯಕ್ತಿಗಳಿದ್ದರೂ ಅಥವಾ ಕಾಲ್ಪನಿಕ ಪಾತ್ರಗಳೋ  ಎನ್ನುವುದು ಕೂಡ ಇನ್ನೂ ಬಗೆಹರಿದಿಲ್ಲ.

ಇದರ ನಡುವೆ ಸ್ಯಾಂಡಲ್‌ವುಡ್ ನಟ ಕಿಶೋರ್‌ ಇನ್ಸ್‌ಟಾಗ್ರಾಮ್‌ನಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳುವ ಮೂಲಕ ಉರಿಗೌಡ ಹಾಗೂ ನಂಜೇಗೌಡ ವಿವಾದದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ, ಇದು ಇಂದಿನ ಪ್ರಜಾಪ್ರಭುತ್ವ. ನಂಜೇಗೌಡ ಉರಿಗೌಡರ ಸೃಷ್ಟಿ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆಯೋ ಯತ್ನವೇ? ಇತ್ತ ಟಿಪ್ಪುವನ್ನು ಕೊಂದವರೆಂದು ಹೇಳಿ ಮುಸ್ಲಿಮರನ್ನೂ ಒಕ್ಕಲಿಗರನ್ನೂ ಒಬ್ಬರ ಮೇಲೊಬ್ಬರನ್ನು ಎತ್ತಿಕಟ್ಟುತ್ತಲೇ ಒಕ್ಕಲಿಗರು ಬ್ರಿಟೀಷರ ಪರವಾಗಿದ್ದರೆಂದು ಹೇಳಿ ಮುಂದೊಂದು ದಿನ ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ? ಎಂದು ಅವರು ಕೇಳಿದ್ದಾರೆ.

ಮೊದಲು ಹಿಂದೂ ಮುಸ್ಲಿಂ ಅಂದರು ಮನೆಯ ಸದಸ್ಯರನ್ನು ಎತ್ತಿಕಟ್ಟಿದರು, ಗಾಂಧಿಯೆಂದರು, ಗಾಂಧಿ ಕೊಂದರು, ರೈತರನ್ನು ಭಯೋತ್ಪಾದಕರೆಂದರು, ಉರಿ ಹೊತ್ತಿಸಿದರು ನಂಜು ಕಾರಿದರು ಒಕ್ಕಲಿಗರೆಂದರು ಟಿಪ್ಪುವೆಂದರು ಬಿಹಾರಿಗಳೆಂದರು ತಮಿಳರೆಂದರು, ಧರ್ಮವೆಂದರು, ಜಾತಿಯೆಂದರು, ದಲಿತರೆಂದರು ಭಾಷೆಯೆಂದರು ದೇಶವೆಂದರು, ಇತಿಹಾಸ ತಿರುಚಿದರು, ಸುಳ್ಳು ಸುದ್ದಿ ಹರಡಿದರು. ಕೇವಲ ಅಧಿಕಾರದಾಸೆಯಿಂದ ಸರ್ವಜನಾಂಗದ ಶಾಂತಿಯ ತೋಟವನ್ನು ಕದಡಿ, ವಸುದೇವ ಕುಟುಂಬಕಂನ ಹೆಮ್ಮೆಯ ಕುಟುಂಬವನ್ನು ಮುರಿಯಲು ಬರುತ್ತಿದ್ದಾರೆ ಮಾಡಿದ ಕೆಲಸದ ಮೇಲೆ ಮತ ಯಾಚಿಸಲು ಯೋಗ್ಯತೆಯಿಲ್ಲದ ಧರ್ಮಾಂಧ ಮನೆಹಾಳರು, ಚುನಾವಣೆಯ ಕಾಲವಿದು ಎಚ್ಚರ ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT