ಯಲಾ ಕುನ್ನಿ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಕೋಮಲ್ ಕುಮಾರ್ ದ್ವಿಪಾತ್ರದಲ್ಲಿ ನಟಿಸಿರುವ 'ಯಲಾ ಕುನ್ನಿ' ಚಿತ್ರದಲ್ಲಿ ವಜ್ರಮುನಿ ಮೊಮ್ಮಗ!

ನಟ ಕೋಮಲ್ ಕುಮಾರ್ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸುತ್ತಿರುವ 'ಯಲಾ ಕುನ್ನಿ' ಚಿತ್ರದ ಮುಹೂರ್ತ ಸಮಾರಂಭವು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿತು

ನಟ ಕೋಮಲ್ ಕುಮಾರ್ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸುತ್ತಿರುವ 'ಯಲಾ ಕುನ್ನಿ' ಚಿತ್ರದ ಮುಹೂರ್ತ ಸಮಾರಂಭವು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರಕ್ಕೆ ಕನ್ನಡ ಚಿತ್ರರಂಗದ ದಂತಕಥೆ ವಜ್ರಮುನಿ ಅವರ ಕುಟುಂಬದ ಎಲ್ಲ ಸದಸ್ಯರು ಆಗಮಿಸಿ ಚಿತ್ರಕ್ಕೆ ಶುಭ ಕೋರಿದ್ದು ವಿಶೇಷವಾಗಿತ್ತು.

'ಯಲಾ ಕುನ್ನಿ' ಖ್ಯಾತ ನಟ ವಜ್ರಮುನಿ ಅವರ ಚಿತ್ರಗಳಲ್ಲಿ ಹೆಚ್ಚಾಗಿ ಬಳಸುತ್ತಿದ್ದ ಪದ. ಈಗ ಆ ಪದವೇ ಚಿತ್ರದ ಶೀರ್ಷಿಕೆಯಾಗಿದೆ. 'ಮೇರಾ ನಾಮ್ ವಜ್ರಮುನಿ..!' ಎಂಬ ಅಡಿಬರಹ ಕೂಡ ಇದೆ.

ವಜ್ರಮುನಿ ಅವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮೀ ವಜ್ರಮುನಿ ಕ್ಯಾಮರಾ ಚಾಲನೆ ಮಾಡಿದರೆ, ಮೊದಲ ಸನ್ನಿವೇಶಕ್ಕೆ ವಜ್ರಮುನಿ ಅವರ ಹಿರಿಯ ಪುತ್ರ ವಿಶ್ವನಾಥ್ ಆರಂಭಫಲಕ ತೋರಿದರು. ವಜ್ರಮುನಿ ಅವರ ಕಿರಿಯ ಪುತ್ರ ಜಗದೀಶ್ ವಜ್ರಮುನಿ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ ಮ ಹರೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ನಾನು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕ ಪ್ರದೀಪ್ ಬಹಳ ಚೆನ್ನಾಗಿ ಕಥೆ , ಚಿತ್ರಕಥೆ , ಸಂಭಾಷಣೆ ಬರೆದಿದ್ದಾರೆ. ಚಿತ್ರದ ಮುಕ್ಕಾಲು ಭಾಗ 1981ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶ್ರೀರಂಗಪಟ್ಟಣ, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಗಂಜಾಂ ಬಳಿ ಪುರಾತನ ದೇವಾಲಯವಿದ್ದು, ಆ ದೇವಾಲಯದಲ್ಲೇ ಹೆಚ್ಚಿನ ಚಿತ್ರೀಕರಣವಾಗಲಿದೆ. ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗುವುದು ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ" ಎಂದು ತಿಳಿಸಿದರು.

ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಈ ಹಿಂದೆ 'ಸಡಗರ' ಚಿತ್ರ ನಿರ್ಮಿಸಿದ್ದ ಮಹೇಶ್ ಗೌಡ್ರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಮತ್ತೊಂದು ವಿಶೇಷವೆಂದರೆ ವಜ್ರಮುನಿ ಅವರ ಮೊಮ್ಮಗ ಆಕರ್ಶ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಹೊಸ ಪ್ರತಿಭೆ ನಿಸರ್ಗ ಈ ಚಿತ್ರದ ನಾಯಕಿ.‌

ಯತಿರಾಜ್ ಜಗ್ಗೇಶ್, ಫ್ರೆಂಚ್ ಬಿರಿಯಾನಿ ಮಹಾಂತೇಶ್ , ಜಯಸಿಂಹ ಮುಸುರಿ, ಅರವಿಂದ್ ರಾವ್, ಮಂಜು ಪಾವಗಡ, ರಾಜು ತಾಳಿಕೋಟೆ, ಶಿವರಾಜ್, ಬಿರಾದರ್, ವೆಂಕಟೇಶ್ ಪ್ರಸಾದ್, ಉಮೇಶ್ ಸಕ್ಕರೆನಾಡು, ಅನಿಲ್ ಯಾದವ್ ಇನ್ನು ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಧರ್ಮವಿಶ್ ಸಂಗೀತ ‌ನಿರ್ದೇಶನ ಹಾಗೂ ಉದಯ್ ಲೀಲಾ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ, ವಿನೋದ್ ಅವರ ಸಾಹಸ ಈ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT