ನಟ ಮನೋಬಾಲ 
ಸಿನಿಮಾ ಸುದ್ದಿ

ತಮಿಳುಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮನೋಬಾಲ ಇನ್ನಿಲ್ಲ

ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮನೋಬಾಲ (69) ಅವರು ಬುಧವಾರ ವಿಧಿವಶರಾಗಿದ್ದಾರೆ.

ಚೆನ್ನೈ: ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮನೋಬಾಲ (69) ಅವರು ಬುಧವಾರ ವಿಧಿವಶರಾಗಿದ್ದಾರೆ.

ಮನೋಬಾಲ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಕೆಲ ತಿಂಗಳುಗಳಿಂದ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಚೆನ್ನೈನ ಸಾಲಿಗ್ರಾಮಂನಲ್ಲಿರುವ ನಿವಾಸದಲ್ಲೇ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ.

ಮನೋಬಾರ ಅವರ ನಿಧನಕ್ಕೆ ಕಾಲಿವುಡ್'ನ ಅನೇಕ ನಟ-ನಟಿಯರು ಕಂಬನಿ ಮಿಡಿದಿದ್ದಾರೆ. ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಬಣ್ಣದ ಲೋಕದಲ್ಲಿ ಮನೋಬಾಲ ಅವರು ಸಕ್ರಿಯರಾಗಿದ್ದರು. ಈ ಸುದೀರ್ಘ ಪಯಣದಲ್ಲಿ ಅವರು 450ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.

1979ರಲ್ಲಿ ಮನೋಬಾಲ ಅವರು ನಟನೆ ಆರಂಭಿಸಿದರು. ಹಲವು ಪೋಷಕ ಪಾತ್ರಗಳಲ್ಲಿ ನಟಿಸುವ ಮೂಲಕ ಅವರು ಜನಪ್ರಿಯರಾಗಿದ್ದರು. ಅವರು ಮಾಡುತ್ತಿದ್ದ ಕಾಮಿಡಿ ಪಾತ್ರಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾದವು. ನಟನೆ ಜೊತೆಗೆ ನಿರ್ದೇಶನದಲ್ಲೂ ಅವರು ಆಸಕ್ತಿ ಬೆಳೆಸಿಕೊಂಡರು. 25ಕ್ಕೂ ಅಧಿಕ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದರು. ಮನೋಬಾಲ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ಕಾಜಲ್​ ಅಗರ್​ವಾಲ್​ ನಟನೆಯ ‘ಘೋಸ್ಟಿ’ ಸಿನಿಮಾದಲ್ಲಿ.

ಸಿನಿಮಾ ಅಷ್ಟೇ ಅಲ್ಲದೆ, ಕಿರುತೆರೆಯಲ್ಲೂ ಮನೋಬಾಲ ಅವರು ಪ್ರೇಕ್ಷಕರ ಮನಗೆದಿದ್ದರು. ನಟನೆಯ ಜೊತೆಗೆ ಕೆಲವು ಧಾರಾವಾಹಿಗಳಿಗೆ ಅವರು ನಿರ್ದೇಶನ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT