ಜೈಲರ್ ಚಿತ್ರದಲ್ಲಿ ರಜಿನಿಕಾಂತ್ 
ಸಿನಿಮಾ ಸುದ್ದಿ

ರಜಿನಿಕಾಂತ್- ಶಿವರಾಜ್‌ಕುಮಾರ್ ನಟನೆಯ 'ಜೈಲರ್' ಬಿಡುಗಡೆಗೆ ದಿನಾಂಕ ನಿಗದಿ

ಮೆಗಾಸ್ಟಾರ್ ರಜಿನಿಕಾಂತ್ ಅವರ ಬಹು ನಿರೀಕ್ಷಿತ ಚಿತ್ರ 'ಜೈಲರ್' ಆಗಸ್ಟ್ 10 ರಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

ಮುಂಬೈ: ಮೆಗಾಸ್ಟಾರ್ ರಜಿನಿಕಾಂತ್ ಅವರ ಬಹು ನಿರೀಕ್ಷಿತ ಚಿತ್ರ 'ಜೈಲರ್' ಆಗಸ್ಟ್ 10 ರಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಚಿತ್ರದ ಬಿಡುಗಡೆ ದಿನಾಂಕ ಮತ್ತು ಟೀಸರ್ ಅನ್ನು ಸನ್ ಪಿಕ್ಚರ್ಸ್ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

'ಜೈಲರ್ ಆಗಸ್ಟ್ 10ರಂದು ಬೇಟೆಯಾಡಲು ಸಿದ್ಧವಾಗಿದ್ದಾರೆ' ಎಂಟು ಸನ್ ಪಿಕ್ಚರ್ಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಗುರುವಾರ ತಿಳಿಸಲಾಗಿದೆ.

ಜೈಲರ್‌ನಲ್ಲಿ ಮಲಯಾಳಂ ನಟ ಮೋಹನ್‌ಲಾಲ್, ನಟಿ ತಮನ್ನಾ ಭಾಟಿಯಾ, ಜಾಕಿ ಶ್ರಾಫ್, ಸ್ಯಾಂಡಲ್‌ವುಡ್ ನಟ ಡಾ. ಶಿವ ರಾಜ್‌ಕುಮಾರ್, ನಟಿ ರಮ್ಯಾ ಕೃಷ್ಣನ್, ಯೋಗಿ ಬಾಬು, ವಸಂತ ರವಿ ಮತ್ತು ವಿನಾಯಕನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನೆಲ್ಸನ್ ತಾವೇ ಕಥೆ ಬರೆದು ಚಿತ್ರವನ್ನು ನಿರ್ದೇಶಿಸಿದ್ದಾರೆ. ವಿಜಯ್ ನಟನೆಯ ಬೀಸ್ಟ್ ಸಿನಿಮಾ ಸನ್ ಪಿಕ್ಚರ್ಸ್ ಜೊತೆಗಿನ ಅವರ ಎರಡನೇ ಸಹಯೋಗ ಜೈಲರ್ ಆಗಿದೆ. 

ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ರಜನಿಕಾಂತ್ ಕೊನೆಯದಾಗಿ 2021 ರ 'ಅನ್ನಾತ್ತೆ' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದರಲ್ಲಿ ನಯನತಾರಾ, ಖುಷ್ಬು ಮತ್ತು ಕೀರ್ತಿ ಸುರೇಶ್ ಕೂಡ ಕಾಣಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!