ಶರತ್ ಬಾಬು 
ಸಿನಿಮಾ ಸುದ್ದಿ

'ಅಮೃತವರ್ಷಿಣಿ' ಖ್ಯಾತಿಯ ಬಹುಭಾಷಾ ನಟ ಶರತ್ ಬಾಬು ವಿಧಿವಿಶ

ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್‌ ಅವರು ಹೈದ್ರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ಶರತ್ ಬಾಬು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್‌ ಅವರು ಹೈದ್ರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸದ್ಯ ಅವರ ಪಾರ್ಥಿವ ಶರೀರವನ್ನು ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ತರಲಾಗುತ್ತಿದೆ ಎಂದು ವರದಿಯಾಗಿದೆ. ಹಲವು ದಿನಗಳಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಶರತ್ ಬಾಬು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ  ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಸೋಮವಾರ (ಮೇ 22) ಚಿಕಿತ್ಸೆ ಫಲಕಾರಿಯಾಗದೇ ಶರತ್ ಬಾಬು ಅವರು ನಿಧನರಾಗಿದ್ದಾರೆ. ಶರತ್ ಬಾಬು ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಚಿತ್ರರಂಗದಲ್ಲಿ 40 ವರ್ಷಗಳನ್ನು ಪೂರೈಸಿರುವ ಶರತ್ ಬಾಬು 200 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ತೆಲುಗು ಮತ್ತು ತಮಿಳು ಸಿನಿಮಾರಂಗದಲ್ಲಿ ಜನಪ್ರಿಯ ನಟನಾಗಿರುವ ಶರತ್ ಬಾಬು ನಾಯಕನಾಗಿ ಪೋಷಕ ನಟನಾಗಿ ಕಾಣಿಸಿಕೊಂಡಿದ್ದಾರೆ. ರಜನೀಕಾಂತ್​ ಜೊತೆಗೆ ಮುತ್ತು, ಅರುಣಾಚಲಂ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT