ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಪ್ರತಾಪ್ ಸಿಂಹ, ರಾಘವೇಂದ್ರ ರಾಜ್‌ಕುಮಾರ್ ನಟನೆಯ ಸ್ತಬ್ಧ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ

ತಮಿಳು ಚಿತ್ರ ಅರಿಯಾಮೈ ನಿರ್ದೇಶನಕ್ಕೆ ಹೆಸರುವಾಸಿಯಾದ ಲಾಲಿ ರಾಘವ್ ಸ್ತಬ್ಧ ಚಿತ್ರದ ಮೂಲಕ ಕನ್ನಡ ಚಲನಚಿತ್ರೋದ್ಯಮಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಸಾಯಿ ಸಾಗರ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿದ್ಯಾಸಾಗರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಸ್ತಬ್ಧ ಚಿತ್ರದ ಸ್ಟಿಲ್
Ramyashree GN
Updated On : 23 May 2023, 2:25 pm

ಸ್ತಬ್ಧ ಚಿತ್ರತಂಡ ಜೂನ್ 9 ರಂದು ಸಿನಿಮಾ ಬಿಡುಗಡೆಗೆ ಸಿದ್ಧರಾಗಿದ್ದಾರೆ. ಇತ್ತೀಚೆಗೆ, ಟ್ರೈಲರ್ ಮತ್ತು ಹಾಡುಗಳನ್ನು ಅನಾವರಣಗೊಳಿಸಲಾಯಿತು ಮತ್ತು ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆಯಿತು. 

ತಮಿಳು ಚಿತ್ರ ಅರಿಯಾಮೈ ನಿರ್ದೇಶನಕ್ಕೆ ಹೆಸರುವಾಸಿಯಾದ ಲಾಲಿ ರಾಘವ್ ಸ್ತಬ್ಧ ಚಿತ್ರದ ಮೂಲಕ ಕನ್ನಡ ಚಲನಚಿತ್ರೋದ್ಯಮಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಸಾಯಿ ಸಾಗರ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿದ್ಯಾಸಾಗರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಸ್ತಬ್ಧ ಸಿನಿಮಾ ಸೈಕಲಾಜಿಕಲ್ ಥ್ರಿಲ್ಲರ್ ಆಗಿದ್ದು, ಅದು ಭ್ರಮೆಯ ಕುರಿತು ಹೇಳುತ್ತದೆ. ಇದು ನಟ ಪ್ರತಾಪ್ ಸಿಂಹ ಅವರ ಚೊಚ್ಚಲ ಚಿತ್ರವಾಗಿದ್ದು, ಹರ್ಷಿಕಾ ಪೂಣಚ್ಚ, ರಾಘವೇಂದ್ರ ರಾಜ್‌ಕುಮಾರ್, ಪ್ರಿಯಾಂಕಾ, ಪ್ರಶಾಂತ್ ಸಿದ್ದಿ ಮತ್ತು ಶ್ರುತಿ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Advertisement

Advertisement

45 ದಿನಗಳ ಶೆಡ್ಯೂಲ್‌ನಲ್ಲಿ ಚಿತ್ರೀಕರಣಗೊಂಡ ಸ್ತಬ್ಧ ಚಿತ್ರವನ್ನು ಬೆಂಗಳೂರು, ಮಂಗಳೂರು ಮತ್ತು ಉಡುಪಿಯಲ್ಲಿ ಚಿತ್ರೀಕರಿಸಲಾಗಿದೆ. ಆರವ್ ರಿಷಿ ಅವರ ಸಂಗೀತ ಮತ್ತು ಪಿವಿಆರ್ ಸ್ವಾಮಿ ಅವರ ಛಾಯಾಗ್ರಹಣದೊಂದಿಗೆ, ಖ್ಯಾತ ಸಂಗೀತ ಸಂಯೋಜಕ ಹಂಸಲೇಖ ಅವರು ಸಾಹಿತ್ಯವನ್ನು ಬರೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments