19.20.21 ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಇಂಡೋ-ಜರ್ಮನ್ ಫಿಲಂ ವೀಕ್ ಚಿತ್ರೋತ್ಸವದಲ್ಲಿ ಮಂಸೋರೆ ನಿರ್ದೇಶನದ 19.20.21 ಸಿನಿಮಾ ಪ್ರದರ್ಶನ

19.20.21 ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಚಿತ್ರ, ಮಂಸೋರೆ ಈ ಚಿತ್ರವನ್ನು ನಿರ್ದೇಶಿಸಿದ್ದು, ಇಂಡೋ-ಜರ್ಮನ್ ಫಿಲ್ಮ್ ವೀಕ್‌ನ 12ನೇ ಆವೃತ್ತಿಯ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ.

19.20.21 ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಚಿತ್ರ, ಮಂಸೋರೆ ಈ ಚಿತ್ರವನ್ನು ನಿರ್ದೇಶಿಸಿದ್ದು, ಇಂಡೋ-ಜರ್ಮನ್ ಫಿಲ್ಮ್ ವೀಕ್‌ನ 12ನೇ ಆವೃತ್ತಿಯ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ.

ಜರ್ಮನಿಯ ಬರ್ಲಿನ್‌ನಲ್ಲಿರುವ ಐತಿಹಾಸಿಕ ಬ್ಯಾಬಿಲೋನ್ ಥಿಯೇಟರ್‌ನಲ್ಲಿ ಅತ್ಯುತ್ತಮ ಚಲನಚಿತ್ರಗಳನ್ನು ಪ್ರದರ್ಶಿಸುವ ಈ ಪ್ರತಿಷ್ಠಿತ ಚಲನಚಿತ್ರೋತ್ಸವವು ಮೇ 29 ರಿಂದ ಜೂನ್ 7ರವರೆಗೆ ನಡೆಯಲಿದೆ.

ಈ ಕುರಿತು ಟ್ವೀಟ್ ಮಾಡಿರುವ ನಿರ್ದೇಶಕ ಮಂಸೋರೆ, ಸ್ನೇಹಿತರೇ, ಇದೇ ಮೇ ತಿಂಗಳ 29 ರಿಂದ ಜೂನ್ 07 ರವರೆಗೆ ಜರ್ಮನಿಯ ಬರ್ಲಿನ್‌ನಲ್ಲಿರುವ ಐತಿಹಾಸಿಕ ಬ್ಯಾಬಿಲೋನ್ ಥಿಯೇಟರ್‌ನಲ್ಲಿ ನಡೆಯಲಿರುವ ಇಂಡೋಜರ್ಮನ್ ಫಿಲಂ ವೀಕ್ 12ನೇ ಆವೃತ್ತಿಯ ಚಲನಚಿತ್ರೋತ್ಸವದಲ್ಲಿ ನಮ್ಮ '19.20.21' ಸಿನೆಮಾ ಪ್ರದರ್ಶನವಾಗಲಿದೆ ಎಂದು ತಿಳಿಸಲು ಸಂತಸವಾಗುತ್ತಿದೆ ಎಂದಿದ್ದಾರೆ.

ಈ ಚಿತ್ರವು ಆಹಾರಕ್ಕಾಗಿ ಅರಣ್ಯವನ್ನು ಅವಲಂಬಿಸಿದ, ಆದರೆ ಮೂಲಭೂತ ಅವಶ್ಯಕತೆಗಳಿಂದ ವಂಚಿತವಾದ ಬುಡಕಟ್ಟು ಸಮುದಾಯದ ಸುತ್ತ ಸುತ್ತುತ್ತದೆ.

ಈ ಹಿನ್ನೆಲೆಯಲ್ಲಿ, ಸಮುದಾಯದ ಯುವ ಮತ್ತು ದೃಢನಿಶ್ಚಯದ ಸದಸ್ಯ ಮಂಜು, ಭರವಸೆಯ ದಾರಿದೀಪವಾಗಿ ಹೊರಹೊಮ್ಮುತ್ತಾರೆ. ವ್ಯವಸ್ಥೆಯನ್ನು ಧೈರ್ಯದಿಂದ ಎದುರಿಸುತ್ತಾರೆ ಮತ್ತು ಸಮುದಾಯದ ಮೊದಲ ಕಾಲೇಜು ಶಿಕ್ಷಣ ಪಡೆದ ವ್ಯಕ್ತಿಯಾಗುತ್ತಾರೆ.

ದೇವರಾಜ್ ಆರ್ ನಿರ್ಮಾಣದ ಈ ಚಿತ್ರವು ಮಾರ್ಚ್ 3 ರಂದು ಬಿಡುಗಡೆಯಾಯಿತು. ವಿಮರ್ಶಾತ್ಮಕವಾಗಿ ಮೆಚ್ಚುಗೆ ಗಳಿಸಿದ ಚಿತ್ರವನ್ನು ಆಗಾಜ್ ಎಂಟರ್‌ಟೈನ್‌ಮೆಂಟ್ ಪ್ರಸ್ತುತಪಡಿಸಿದೆ.

ಚಿತ್ರದಲ್ಲಿ ಶೃಂಗ ಬಿ ವಿ, ಬಾಲಾಜಿ ಮನೋಹರ್, ಎಂ ಡಿ ಪಲ್ಲವಿ, ರಾಜೇಶ್ ನಟರಂಗ, ಅವಿನಾಶ್, ಮಹದೇವ್ ಹಡಪದ್, ವಿಶ್ವ ಕರ್ಣ ಮತ್ತು ವೆಂಕಟೇಶ್ ಪ್ರಸಾದ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT