ಪವನ್ ಬಸ್ರೂರು 
ಸಿನಿಮಾ ಸುದ್ದಿ

'ಕ್ಲಿಕ್' ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ರವಿ ಬಸ್ರೂರು ಪುತ್ರ 'ಪವನ್' ಎಂಟ್ರಿ!

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರ ಪುತ್ರ ಪವನ್ ಬಸ್ರೂರ್ ಅವರು ಬಣ್ಣದ ಲೋಕಕ್ಕೆ ಎಂಟ್ರಿ ನೀಡುತ್ತಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರ ಪುತ್ರ ಪವನ್ ಬಸ್ರೂರ್ ಅವರು ಬಣ್ಣದ ಲೋಕಕ್ಕೆ ಎಂಟ್ರಿ ನೀಡುತ್ತಿದ್ದಾರೆ.

ಶಶಿಕುಮಾರ್ ನಿರ್ದೇಶನದ ಕ್ಲಿಕ್ ಎಂಬ ಈ ಚಿತ್ರವು ಮಕ್ಕಳ ಚಲನಚಿತ್ರವಾಗಿದೆ. ಕಾರ್ತಿಕ್, ಸಿಲ್ಲಿ ಲಲ್ಲಿ ಆನಂದ್, ಚಂದ್ರಕಲಾ ಮೋಹನ್, ಸಂಜು ಬಸಯ್ಯ, ಸುಮನಾ, ರಚನಾ ದಶರತ್ ಮತ್ತು ಇತರರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

16 ವರ್ಷದ ಪವನ್ ತನ್ನ ಜನ್ಮದಿನದ ಆಚರಣೆಯ ಸಂದರ್ಭದಲ್ಲಿ ಈ ಸಂಬಂಧ ಮಾಹಿತಿ ನೀಡಲಾಗಿದೆ. ತನ್ನ ತಂದೆ  ರವಿ ಬಸ್ರೂರು ಪೋಸ್ಟ್ ಮಾಡಿದ ವೀಡಿಯೊಗಳ ಮೂಲಕ ಗಮನ ಸೆಳೆದ ಯುವ ಪ್ರತಿಭೆಯಯನ್ನು ನಿರ್ದೇಶಕರು ಸಿನಿಮಾಗೆ ಆಯ್ಕೆ ಮಾಡಿದ್ದಾರೆ.

‘ನಿಮ್ಮಲ್ಲಿರುವ ಪ್ರತಿಭೆ’ ಎಂಬ ಶೀರ್ಷಿಕೆಯನ್ನು ಹೊಂದಿರುವ ಕ್ಲಿಕ್, ಮನೆಯಲ್ಲಿ ನಿರ್ಲಕ್ಷ್ಯವನ್ನು ಎದುರಿಸುವ ಮಕ್ಕಳ ಮನಸ್ಥಿತಿ, ಅವರ ಶೈಕ್ಷಣಿಕ ಹೋರಾಟಗಳು ಮತ್ತು ಅದರಿಂದಾಗುವ ಅಭದ್ರತೆಗಳನ್ನು ಪರಿಶೋಧಿಸುವ ಕಥೆಯಾಗಿದ್ದು, ಸದ್ಯ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

ಶರಣ್ಯಾ ಫಿಲಂಸ್ ಬ್ಯಾನರ್ ಅಡಿಯಲ್ಲಿ ಶಶಿಕಿರಣ್ ನಿರ್ಮಿಸಿದ್ದಾರೆ. ಚಿತ್ರಕ್ಕೆ ವಿಶ್ವಾಸ್ ಕೌಶಿಕ್ ಸಂಗೀತ ಸಂಯೋಜಿಸಿದ್ದು, ಆಕಾಶ್ ಪರ್ವ ಹಿನ್ನೆಲೆ ಸಂಗೀತವನ್ನು ನಿರ್ವಹಿಸಿದ್ದಾರೆ. ಜೀವನ್ ಗೌಡ ಛಾಯಾಗ್ರಹಣ, ವಿನಯ್ ಕುಮಾರ್ ಸಂಕಲನವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT