ನಟ ದರ್ಶನ್ ವಿರುದ್ಧ ಮಹಿಳೆ ದೂರು 
ಸಿನಿಮಾ ಸುದ್ದಿ

ಸಾಕು ನಾಯಿ ದಾಳಿ ಆರೋಪ: ನಟ ದರ್ಶನ್ ತೂಗುದೀಪ ವಿರುದ್ಧ ಮಹಿಳೆ ಪೊಲೀಸ್ ದೂರು

ಸಾಕು ನಾಯಿ ದಾಳಿ ಆರೋಪದ ಮೇರೆಗೆ ಖ್ಯಾತ ನಟ ತೂಗುದೀಪ ದರ್ಶನ್ (Darshan Thoogudeepa) ಅವರ ವಿರುದ್ಧ ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಬೆಂಗಳೂರು: ಸಾಕು ನಾಯಿ ದಾಳಿ ಆರೋಪದ ಮೇರೆಗೆ ಖ್ಯಾತ ನಟ ತೂಗುದೀಪ ದರ್ಶನ್ (Darshan Thoogudeepa) ಅವರ ವಿರುದ್ಧ ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಟ ದರ್ಶನ್ ಮನೆಯ ಸಾಕು ನಾಯಿ, ಮಹಿಳೆಯೊಬ್ಬರಿಗೆ ಕಡಿದು ಗಾಯಗೊಳಿಸಿ ಆರೋಪದ ಮೇರೆಗೆ ಅಮಿತಾ ಜಿಂದಾಲ್ ಎಂಬ ಮಹಿಳೆಯು ದರ್ಶನ್ ಹಾಗೂ ಇತರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ದರ್ಶನ್​ರ ಆರ್​ಆರ್ ನಗರದ ನಿವಾಸದ ಬಳಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆ ನಡೆಯುವ ಮುನ್ನ ದರ್ಶನ್​ರ ಮನೆ ಸಿಬ್ಬಂದಿ ಮಹಿಳೆಯೊಂದಿಗೆ ವಾಗ್ವಾದ ಮಾಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಮಹಿಳೆ ದೂರಿನಲ್ಲಿ ಹೇಳಿಕೊಂಡಿರುವಂತೆ ಆರ್​ ಆರ್​ ನಗರದಲ್ಲಿ ಆಸ್ಪತ್ರೆ ಕಾರ್ಯಕ್ರಮವೊಂದಕ್ಕೆ ಮಹಿಳೆ ಆಗಮಿಸಿದ್ದರು. ದರ್ಶನ್ ಮನೆಯ ಬಳಿ ಖಾಲಿ ಜಾಗದಲ್ಲಿ ತಮ್ಮ ಕಾರನ್ನು ಮಹಿಳೆ ನಿಲ್ಲಿಸಿದ್ದರು. ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವಂತೆ. ದರ್ಶನ್​ರ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಮಹಿಳೆ ಕೇಳಿದ್ದಾರೆ.

ಆಗ ವಾಗ್ವಾದ ನಡೆಸಿರುವ ದರ್ಶನ್ ಮನೆಯ ಸಿಬ್ಬಂದಿ, ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದಿದ್ದಾರೆ. ಮಹಿಳೆ ಹಾಗೂ ದರ್ಶನ್​ರ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಬಳಿಕ ನಾಯಿಗಳು ಮಹಿಳೆಯ ಮೇಲೆ ದಾಳಿ ನಡೆಸಿ ಹೊಟ್ಟೆ ಹಾಗೂ ಕೈಗೆ ಕಚ್ಚಿ ಗಾಯಗೊಳಿಸಿವೆ. 

ಗಾಯಗೊಂಡ ಮಹಿಳೆ ಆರ್​ಆರ್ ನಗರ ಪೊಲೀಸ್ ಠಾಣೆಗೆ ಹೋಗಿ ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದು, ಮನೆಯ ಸಿಬ್ಬಂದಿಗಳನ್ನು ಮೊದಲ ಆರೋಪಿಯನ್ನಾಗಿಸಿದ್ದರೆ, ನಟ ದರ್ಶನ್​ರನ್ನು ಎರಡನೇ ಆರೋಪಿಯನ್ನಾಗಿಸಿ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT