ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಪ್ರೇಮದ ಬಗೆಗಿನ ಮಹಿಳೆಯ ದೃಷ್ಟಿಕೋನವೇ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ 'ಮೆಲ್ಲಗೆ' ಹಾಡು: ರಾಜ್ ಬಿ ಶೆಟ್ಟಿ

ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಸದ್ಯ ಚಿತ್ರತಂಡ ಸಿನಿಮಾದ 'ಮೆಲ್ಲಗೆ' ಶೀರ್ಷಿಕೆಯ ಹಾಡೊಂದನ್ನು ಬಿಡುಗಡೆ ಮಾಡಿದೆ. ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆಯಾದ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದೊಂದಿಗೆ ನಿರ್ಮಿಸಲಾಗಿದೆ

ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಸದ್ಯ ಚಿತ್ರತಂಡ ಸಿನಿಮಾದ 'ಮೆಲ್ಲಗೆ' ಶೀರ್ಷಿಕೆಯ ಹಾಡೊಂದನ್ನು ಬಿಡುಗಡೆ ಮಾಡಿದೆ. ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆಯಾದ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದೊಂದಿಗೆ ನಿರ್ಮಿಸಲಾಗಿದೆ. ಚಿತ್ರವು ನವೆಂಬರ್ 24 ರಂದು ಕೆಆರ್‌ಜಿ ಸ್ಟುಡಿಯೋಸ್ ಅಡಿಯಲ್ಲಿ ಬಿಡುಗಡೆಯಾಗಲಿದೆ. ರಾಜ್ ಬಿ ಶೆಟ್ಟಿಗೆ ಜೋಡಿಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ.

'ಮೆಲ್ಲಗೆ' ಹಾಡಿನ ಸಾಹಿತ್ಯವನ್ನು ಪೃಥ್ವಿ ಬರೆದಿದ್ದು, ಮಿಧುನ್ ಮುಕುಂದನ್ ಸಂಗೀತ ಸಂಯೋಜನೆ ಇದೆ. ಮಾಧುರಿ ಶೇಷಾದ್ರಿ ತಮ್ಮ ಧ್ವನಿ ನೀಡಿದ್ದಾರೆ. ಇದೊಂದು ಮೆಲೋಡಿ ಟ್ರ್ಯಾಕ್ ಆಗಿದ್ದು, ಪ್ರೇಮದ ಬಗೆಗಿನ ಮಹಿಳೆಯ ದೃಷ್ಟಿಕೋನದ ಬಗ್ಗೆ ಒಂದು ಅನನ್ಯ ಒಳನೋಟವನ್ನು ನೀಡುತ್ತದೆ. ಅದಕ್ಕಾಗಿಯೇ ಅವರು ಪೃಥ್ವಿಯನ್ನು ಗೀತರಚನೆಕಾರರಾಗಿ ಆಯ್ಕೆ ಮಾಡಿದ್ದಾಗಿ ರಾಜ್ ವಿವರಿಸುತ್ತಾರೆ.

 'ನಾನು ಆಕೆಯ ಅನನ್ಯ ದೃಷ್ಟಿಕೋನವನ್ನು ಬಯಸುತ್ತೇನೆ' ಎನ್ನುವ ರಾಜ್, ಮಿಧುನ್ ಮುಕುಂದನ್ ಅವರ ಕೆಲಸದ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಸಿರಿ ರವಿಕುಮಾರ್ ಕೂಡ ಈ ಹಾಡಿನ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

ಚಿತ್ರದಲ್ಲಿ ಬಾಲಾಜಿ ಮನೋಹರ್, ಸೂರ್ಯ ವಸಿಷ್ಟ, ರೇಖಾ ಕೂಡ್ಲಿಗಿ, ತೂಮಿನಾಡು ಮತ್ತು ಸ್ನೇಹಾ ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರವೀಣ್ ಶ್ರೀಯಾನ್ ಸಿನಿಮಾಟೋಗ್ರಾಫರ್ ಮತ್ತು ಸಂಕನಲಕಾರರಾಗಿ ಎರಡು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!