ಮಾನ್ಯ ಸಿಂಗ್ 
ಸಿನಿಮಾ ಸುದ್ದಿ

ಫಸ್ಟ್ ನೈಟ್ ವಿತ್ ದೇವ: ಪ್ರಥಮ್ ನಟನೆಯ ಚಿತ್ರದ ಮೂಲಕ ಕನ್ನಡಕ್ಕೆ ಮಿಸ್ ಇಂಡಿಯಾ ರನ್ನರ್ ಅಪ್ ಪದಾರ್ಪಣೆ!

ಬಿಗ್ ಬಾಸ್ ಕನ್ನಡ ಸೀಸನ್ 4ರ ವಿಜೇತ ನಟ ಪ್ರಥಮ್ ಇದೇ ತಿಂಗಳು ಮದುವೆಯಾಗುತ್ತಿದ್ದಾರೆ. ಇದರೊಂದಿಗೆ ತಮ್ಮ ಮುಂದಿನ ಯೋಜನೆಯಾದ 'ಫಸ್ಟ್ ನೈಟ್ ವಿತ್ ದೇವ' ನವೆಂಬರ್ 16 ರಂದು ಸೆಟ್ಟೇರಲಿದೆ. ಈ ಸಿನಿಮಾದ ಮೂಲಕ ಮಿಸ್ ಇಂಡಿಯಾದಲ್ಲಿ ಭಾಗವಹಿಸಿದ್ದ ಮಾನ್ಯ ಸಿಂಗ್ ಅವರು ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. 

ಬಿಗ್ ಬಾಸ್ ಕನ್ನಡ ಸೀಸನ್ 4ರ ವಿಜೇತ ನಟ ಪ್ರಥಮ್ ಇದೇ ತಿಂಗಳು ಮದುವೆಯಾಗುತ್ತಿದ್ದಾರೆ. ಇದರೊಂದಿಗೆ ತಮ್ಮ ಮುಂದಿನ ಯೋಜನೆಯಾದ 'ಫಸ್ಟ್ ನೈಟ್ ವಿತ್ ದೇವ' ನವೆಂಬರ್ 16 ರಂದು ಸೆಟ್ಟೇರಲಿದೆ.

ಮಾನ್ಯ

ಈ ಸಿನಿಮಾದ ಮೂಲಕ ಮಿಸ್ ಇಂಡಿಯಾದಲ್ಲಿ ಭಾಗವಹಿಸಿದ್ದ ಮಾನ್ಯ ಸಿಂಗ್ ಅವರು ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಮಾನ್ಯ ಅವರು ಫೆಮಿನಾ ಮಿಸ್ ಇಂಡಿಯಾ 2020ರ ರನ್ನರ್ ಅಪ್ ಆಗಿದ್ದಾರೆ ಮತ್ತು ಹಿಂದಿಯ ಬಿಗ್ ಬಾಸ್ ಸೀಸನ್ 16ನಲ್ಲಿ ಕಾಣಿಸಿಕೊಂಡಿದ್ದರು.

ಮಾನ್ಯ ಅವರ ತಂದೆ ಆಟೋ ರಿಕ್ಷಾ ಚಾಲಕರು ಮತ್ತು ತಾಯಿ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದು, ಮಿಸ್ ಇಂಡಿಯಾ ಸ್ಪರ್ಧೆಯೊಂದಿಗೆ ಮಾನ್ಯ ಹೆಸರು ಮುನ್ನೆಲೆಗೆ ಬಂದಿತು. ಇದೀಗ 'ಫಸ್ಟ್ ನೈಟ್ ವಿತ್ ದೇವ' ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ಪ್ರಥಮ್ ಮತ್ತು ಮಾನ್ಯ ಸಿಂಗ್ ಮುಖ್ಯ ಭೂಮಿಕೆಯಲ್ಲಿರುವ ಫಸ್ಟ್ ನೈಟ್ ವಿತ್ ದೇವ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ ಮತ್ತು ಮಿಮಿಕ್ರಿ ಗೋಪಿ ನಟಿಸಿದ್ದಾರೆ.

ಚಿತ್ರಕ್ಕೆ ಥ್ರಿಲ್ಲರ್ ಮಂಜು ಅವರ ಸಾಹಸ ಸಂಯೋಜನೆ ಮತ್ತು ಯೋಗರಾಜ್ ಭಟ್ ಅವರ ಸಾಹಿತ್ಯ ಇದೆ. ನಿರ್ದೇಶಕರೇ ಚಿತ್ರದ ಛಾಯಾಗ್ರಾಹಕರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ. ಈ ಚಿತ್ರದ ಕುರಿತು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ