ಸಲಾರ್ ಚಿತ್ರದಲ್ಲಿ ನಟ ಪ್ರಭಾಸ್ 
ಸಿನಿಮಾ ಸುದ್ದಿ

ಪ್ರಭಾಸ್ ನಟನೆಯ 'ಸಲಾರ್: ಭಾಗ 1' ಚಿತ್ರದ ಹೊಸ ಪೋಸ್ಟರ್ ರಿಲೀಸ್; ಟ್ರೇಲರ್ ಬಿಡುಗಡೆ ದಿನಾಂಕ ಘೋಷಣೆ

ದೀಪಾವಳಿಯನ್ನು ಹೆಚ್ಚು ವಿಶೇಷವಾಗಿಸಲು 'ಸಲಾರ್: ಭಾಗ 1- ಕದನ ವಿರಾಮ' ಚಿತ್ರತಂಡ ನಟ ಪ್ರಭಾಸ್ ಅವರ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದ್ದು, ಟ್ರೈಲರ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.

ಮುಂಬೈ: ದೀಪಾವಳಿಯನ್ನು ಹೆಚ್ಚು ವಿಶೇಷವಾಗಿಸಲು 'ಸಲಾರ್: ಭಾಗ 1- ಕದನ ವಿರಾಮ' ಚಿತ್ರತಂಡ ನಟ ಪ್ರಭಾಸ್ ಅವರ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದ್ದು, ಟ್ರೈಲರ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.

ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಅಭಿಮಾನಿಗಳಿಗೆ ಸಿಹಿ ಸಿದ್ದಿಯೊಂದನ್ನು ನೀಡಿದೆ. ಹೊಸ ಪೋಸ್ಟರ್‌ನಲ್ಲಿ ಪ್ರಭಾಸ್ ಕಾರಿನ ಮೇಲೆ ಕೈಯಲ್ಲಿ ಗನ್ ಹಿಡಿದು ನಿಂತಿದ್ದಾರೆ. 

ಪೋಸ್ಟರ್ ಅನ್ನು ಹಂಚಿಕೊಂಡಿರುವ ಹೊಂಬಾಳೆ ಫಿಲ್ಮ್ಸ್, 'ಸ್ಫೋಟಕ ಸಂಭ್ರಮಾಚರಣೆಗೆ ಸಜ್ಜಾಗಿರಿ ಸಲಾರ್ ಚಿತ್ರದ ಟ್ರೇಲರ್ ಡಿಸೆಂಬರ್ 1 ರಂದು ರಾತ್ರಿ 7.19ಕ್ಕೆ ಸ್ಫೋಟಗೊಳ್ಳಲಿದೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು' ಎಂದು ಬರೆದಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ಚಿತ್ರದ ಟ್ರೇಲರ್ ಡಿಸೆಂಬರ್ 1 ರಂದು ಬಿಡುಗಡೆಗೆ ಸಿದ್ಧವಾಗಿದೆ.

ಈ ಸುದ್ದಿಯನ್ನು ಹಂಚಿಕೊಂಡ ತಕ್ಷಣ, ಪ್ರಭಾಸ್ ಅಭಿಮಾನಿಗಳು ಶುಭಾಶಯಗಳ ಮಳೆಯನ್ನೇ ಹರಿಸಿದ್ದಾರೆ.

ಬಳಕೆದಾರರಲ್ಲಿ ಒಬ್ಬರು, 'ನಿಮ್ಮ ಮಾಸ್ ಕಂಬ್ಯಾಕ್‌ಗಾಗಿ ನಿರೀಕ್ಷಿಸಲಾಗುತ್ತಿದೆ ಅಣ್ಣಾ' ಎಂದು ಬರೆದಿದ್ದಾರೆ. ಇನ್ನೊಬ್ಬ ಬಳಕೆದಾರರು, 'ಇದು ಜಗತ್ತನ್ನು ಆಳುವ ಸಮಯ...' ಎಂದಿದ್ದಾರೆ. 

ಸಲಾರ್: ಭಾಗ 1- ಕದನ ವಿರಾಮವು ಭಾರತೀಯ ಚಿತ್ರರಂಗದ ಎರಡು ಶಕ್ತಿ ಕೇಂದ್ರಗಳಾದ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು 'ಬಾಹುಬಲಿ' ಖ್ಯಾತಿಯ ನಟ ಪ್ರಭಾಸ್ ಅವರ ದೊಡ್ಡ ಸಹಯೋಗವಾಗಿದೆ. ಈ ಮೆಗಾ ಆ್ಯಕ್ಷನ್-ಪ್ಯಾಕ್ಡ್ ಸಿನಿಮೀಯ ಚಮತ್ಕಾರವನ್ನು ಉಂಟುಮಾಡಲು ಮೊದಲ ಬಾರಿಗೆ ಇಬ್ಬರು ಒಟ್ಟಿಗೆ ಬರುತ್ತಿದ್ದಾರೆ.

ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮತ್ತು ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ಚಿತ್ರವನ್ನು ನಿರ್ಮಿಸಿದ್ದಾರೆ.

ಡಿಸೆಂಬರ್ 22 ರಂದು ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ಸಲಾರ್ ಸಿನಿಮಾ ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್