ಘೋಸ್ಟ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಒಟಿಟಿಗೆ ಲಗ್ಗೆ!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಶ್ರೀನಿ ಜೋಡಿಯ ಘೋಸ್ಟ್ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಅಕ್ಟೋಬರ್ 19ರಂದು ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಈ ಚಿತ್ರ ತೆರೆಕಂಡಿತ್ತು. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿರುವ 'ಘೋಸ್ಟ್ ಇದೀಗ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾಗಿದೆ. 

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಶ್ರೀನಿ ಜೋಡಿಯ ಘೋಸ್ಟ್ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಅಕ್ಟೋಬರ್ 19ರಂದು ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಈ ಚಿತ್ರ ತೆರೆಕಂಡಿತ್ತು. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿರುವ 'ಘೋಸ್ಟ್ ಇದೀಗ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾಗಿದೆ.

ಶಿವರಾಜ್‌ ಕುಮಾರ್ ‘ಘೋಸ್ಟ್’ ಸಿನಿಮಾ ಒಟಿಟಿಗೆ ಲಗ್ಗೆ ಇಡುವುದಕ್ಕೆ ರೆಡಿಯಾಗಿದೆ. ಇದು ಜೀ 5ನಲ್ಲಿ ನವೆಂಬರ್ 17ರಿಂದ ಪ್ರಸಾರ ಆಗಲಿದೆ. ಈ ಸಂಬಂಧ ಸ್ಪೆಷಲ್ ಪ್ರೋಮೋ ಬಿಡುಗಡೆ ಮಾಡಲಾಗಿದೆ.ಆ ಚೀಟಿಯ ಹಿಂಭಾಗಕ್ಕೆ ಶಿವರಾಜ್ ಕುಮಾರ್ ಬೆಂಕಿ ಹಿಡಿದಿರುವ ಅದರಲ್ಲಿ ಒಂದು ಮೆಸೇಜ್ ಕಂಡು ಬರುತ್ತದೆ. ಅದರಲ್ಲಿ 'ಘೋಸ್ಟ್ʼ ಚಿತ್ರವನ್ನು ಜೀ-5ನಲ್ಲಿ ನವೆಂಬರ್ 17ರಿಂದ ನೋಡಬಹುದು ಎಂಬ ಮೆಸೇಜ್ ಮೂಡುತ್ತದೆ.

ಸಂದೇಶ್‌ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ಘೋಸ್ಟ್’ ಸಿನಿಮಾ ನಿರ್ಮಾಣಗೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಬಾಲಿವುಡ್‌ ನಟ ಅನುಪಮ್ ಕೇರ್, ಮಾಲಿವುಡ್‌ ಸ್ಟಾರ್‌ ಜಯರಾಂ, ಕೆಜಿಎಫ್‌ ಖ್ಯಾತಿಯ ಅರ್ಚನಾ ಜೋಯಿಸ್‌,  ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.

ಇನ್ನು ಚಿತ್ರದಲ್ಲಿ ನಾಯಕಿ ಇಲ್ಲ ಎನ್ನುವುದು ವಿಶೇಷ. ಅಂದಹಾಗೆ ಶ್ರೀನಿ ಕೂಡ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ಯಾಂಗ್ ಸ್ಟರ್‌ ಆಗಿ ಅಬ್ಬರಿಸಿರುವ ಶಿವಣ್ಣನ ʼಘೋಸ್ಟ್ʼ ಸಿನಿಮಾವನ್ನು ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡವರು ಜೀ5 ಒಟಿಟಿಯಲ್ಲಿ‌ ನೋಡಬಹುದು. ಘೋಸ್ಟ್ ಒಂದು ವಾಣಿಜ್ಯ ಚಿತ್ರಕ್ಕೆ ಅಗತ್ಯವಿರುವ ಎಲ್ಲಾ ಅಂಶಗಳನ್ನು ಒಳಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!