ನಟ ದರ್ಶನ್ ಲಾಂಗ್ ಹಿಡಿದಿರುವ ಫೋಟೋ 
ಸಿನಿಮಾ ಸುದ್ದಿ

ಸಾರ್ವಜನಿಕವಾಗಿ ಲಾಂಗ್ ಹಿಡಿದು ದರ್ಶನ್ ಪೋಸ್! ಮತ್ತೆ ವಿವಾದ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾರ್ವಜನಿಕವಾಗಿ ಲಾಂಗ್ ಹಿಡಿಯುವ ಮೂಲಕ ಇದೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚಿಗೆ ಜಯನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಲಾಂಗ್ ಹಿಡಿದುಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ. 

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾರ್ವಜನಿಕವಾಗಿ ಲಾಂಗ್ ಹಿಡಿಯುವ ಮೂಲಕ ಇದೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚಿಗೆ ಜಯನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಲಾಂಗ್ ಹಿಡಿದುಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಹೌದು. ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದ ನಟ ದರ್ಶನ್ ಹಾಗೂ ಅಭಿಷೇಕ್ ಅಂಬರೀಶ್ ಅವರನ್ನು ಭರ್ಜರಿಯಾಗಿ ಸನ್ಮಾನಿಸಿದ್ದಾರೆ. ಈ ವೇಳೆ ದರ್ಶನ್ ಮತ್ತು ಅಭಿಗೆ ಬೆಳ್ಳಿ ಕಿರೀಟ, ಲಾಂಗ್ ಉಡುಗೊರೆ ನೀಡಿದ್ದಾರೆ. ದರ್ಶನ್ ಲಾಂಗ್​ ಹಿಡಿದು ಪೋಸ್​ ಕೊಟ್ಟಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಟರು ಸಾರ್ವಜನಿಕವಾಗಿ ಈ ರೀತಿ ಲಾಂಗ್ ಹಿಡಿದು ಫೋಟೋಗೆ ಪೋಸ್ ನೀಡುವುದು ಸರಿಯಲ್ಲ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ. ಈ ಬಗ್ಗೆ ದೂರು ದಾಖಲಾಗುವ ಸಾಧ್ಯತೆಯಿದೆ. 

ಇತ್ತೀಚಿಗೆ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಹಿನ್ನೆಲೆಯಲ್ಲಿ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು, ಇದೀಗ ಹೊಸ ಸಮಸ್ಯೆ ಎದುರಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!