ಹಿರಿಯ ನಟ ಕ್ಯಾಪ್ಟನ್ ವಿಜಯಕಾಂತ್ 
ಸಿನಿಮಾ ಸುದ್ದಿ

ಚೆನ್ನೈ: ಹಿರಿಯ ನಟ ಕ್ಯಾಪ್ಟನ್ ವಿಜಯಕಾಂತ್'ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಕಾಲಿವುಡ್ ಚಿತ್ರರಂಗ ಹೆಸರಾಂತ ನಟ ಹಾಗೂ ಡಿಎಂಡಿಕೆ (ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ) ಮುಖ್ಯಸ್ಥ ಕ್ಯಾಪ್ಟನ್ ವಿಜಯಕಾಂತ್ ಅವರು ಅನಾರೋಗ್ಯಕ್ಕೀಡಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ಚೆನ್ನೈ: ಕಾಲಿವುಡ್ ಚಿತ್ರರಂಗ ಹೆಸರಾಂತ ನಟ ಹಾಗೂ ಡಿಎಂಡಿಕೆ (ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ) ಮುಖ್ಯಸ್ಥ ಕ್ಯಾಪ್ಟನ್ ವಿಜಯಕಾಂತ್ ಅವರು ಅನಾರೋಗ್ಯಕ್ಕೀಡಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ಕಳೆದೆರಡು ದಿನಗಳಿಂದ ವಿಜಯಕಾಂತ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

ವಿಜಯಕಾಂತ್ ಅತೀವ್ರ ಜ್ವರ, ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇದು ಸುಳ್ಳೆಂದು ಡಿಎಂಡಿಕೆ ಪಕ್ಷದ ಕಾರ್ಯಕರ್ತರು ಹೇಳಿದ್ದಾರೆ.

ಕ್ಯಾಪ್ಟನ್ ವಿಜಯಕಾಂತ್ ಅವರಿಗೆ 71 ವರ್ಷ ವಯಸ್ಸಾಗಿದ್ದು, ವಯೋ ಸಹಜ ಕಾಯಿಲೆಗಳು ಅವರನ್ನು ಕಾಡುತ್ತಿವೆ. ಎರಡು ದಿನಗಳ ಹಿಂದೆ ಅವರು ರೆಗ್ಯುಲರ್ ತಪಾಸಣೆಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲೆಯಾಗಿದ್ದಾರೆ ಎಂದು ಗೊಂದಲದ ಹೇಳಿಕೆಗಳನ್ನೂ ಪಕ್ಷ ನೀಡಿತ್ತು.

ಇದರ ನಡುವಲ್ಲೇ ತಮಿಳುನಾಡು ಆರೋಗ್ಯ ಸಚಿವರು ನೀಡಿದ ಮತ್ತೊಂದು ಹೇಳಿಕೆ ಅಭಿಮಾನಿಗಳನ್ನು ಆತಂಕಕ್ಕೆ ದೂಡಿದೆ.

ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಮಾತನಾಡಿದ್ದೇನೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಸಹಜವಾಗಿಯೇ ವಿಜಯಕಾಂತ್ ಆರೋಗ್ಯದ ಬಗ್ಗೆ ಗೊಂದಲ ಮೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ 830 ಕೋಟಿ ರೂ. ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ, ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ

ತಮ್ಮ ಕ್ಷೇತ್ರ ವರುಣಾದಲ್ಲಿ 324 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

3rd ODI: ಕೊಹ್ಲಿಯ 85ನೇ ಶತಕ ವ್ಯರ್ಥ; ಏಕದಿನ ಸರಣಿ ಗೆದ್ದು ಬೀಗಿದ ನ್ಯೂಜಿಲೆಂಡ್

ಸಾಕಪ್ಪ ಹೋಗು ಎಷ್ಟು ಹೊಡಿತೀಯಾ: ಶತಕ ಸಿಡಿಸಿದ ಕಿವೀಸ್ ಬ್ಯಾಟ್ಸ್‌ಮನ್‌ನನ್ನು ಪೆವಿಲಿಯನ್‌ಗೆ ತಳ್ಳಿದ Kohli, Video

KSRTC ಸೇರಿದಂತೆ ನಾಲ್ಕು ನಿಗಮಗಳ ನೌಕರರಿಂದ ಮುಷ್ಕರ ಘೋಷಣೆ: ಜ. 29 ರಂದು ಬೆಂಗಳೂರು ಚಲೋ

SCROLL FOR NEXT