ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಹಿರಿಯ ನಟಿ ಲೀಲಾವತಿ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್ ದಂಪತಿ

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಮಂಗಳವಾರ...

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಮಂಗಳವಾರ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಇಂದು ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ತೋಟದ ಮನೆಗೆ ಭೇಟಿ ನೀಡಿದ ಶಿವರಾಜ್ ಕುಮಾರ್ ದಂಪತಿ, ಲೀಲಾವತಿ ಅವರ ಪುತ್ರ, ನಟ ವಿನೋದ್ ರಾಜ್ ಅವರಿಗೆ ಧೈರ್ಯ ತುಂಬಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಣ್ಣ,  ‘ಅಮ್ಮ ನನ್ನ ಧ್ವನಿ ಕಂಡು ಹಿಡಿದರು. ಈ ವಯಸ್ಸಿನಲ್ಲಿಯೂ ಅವರು ನೋವನ್ನು ಸಹಿಸಿಕೊಂಡು ಇರುವ ಶಕ್ತಿ ಇದೆಯಲ್ಲ ಅದು ಸಾಮಾನ್ಯದ್ದಲ್ಲ. ಯೋಗ ಪುರುಷರು ಅನ್ನುತ್ತಾರಲ್ಲ ಹಾಗೆ. ಈಗಲೂ ಅವರು ಸ್ಟ್ರಾಂಗ್ ಆಗಿದ್ದಾರೆ. ಆಗಿನ ಕಾಲದವರು ಅವರು, ಒಳ್ಳೆಯ ಮನಸ್ಸಿರುವವರು, ಒಳ್ಳೆಯ ವ್ಯಕ್ತಿ. ನಾವು ಅವರನ್ನು ಇಷ್ಟೋಂದು ಪ್ರೀತಿಸಲು ಅದೇ ಕಾರಣ’ ಎಂದರು.

ಮನೆಗೆ ಆಗಮಿಸಿದ್ದ ಶಿವರಾಜ್ ಕುಮಾರ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ವಿನೋದ್ ರಾಜ್ ಅವರು, ಅಮ್ಮನ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಶಿವಣ್ಣ ಮತ್ತು ವಿನೋದ್ ರಾಜ್ ತಬ್ಬಿಕೊಂಡು ಭಾವುಕ ಕ್ಷಣಕ್ಕೆ ಸಾಕ್ಷಿಯಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ