ಭರತ್ ಎಸ್ ನಾವುಂದ - ತಾಂಡವ್ ರಾಮ್ 
ಸಿನಿಮಾ ಸುದ್ದಿ

'ಮುಗಿಲ್‌ಪೇಟೆ' ಚಿತ್ರ ನಿರ್ದೇಶಕರ ಹೊಸ ಸಿನಿಮಾದಲ್ಲಿ 'ಜೋಡಿ ಹಕ್ಕಿ' ಧಾರಾವಾಹಿ ಖ್ಯಾತಿಯ ತಾಂಡವ್ ರಾಮ್ ನಾಯಕ

ಮನೋರಂಜನ್ ಅಭಿನಯದ ಮುಗಿಲ್‌ಪೇಟೆ ಚಿತ್ರ ನಿರ್ದೇಶಿಸಿದ್ದ ಭರತ್ ಎಸ್ ನಾವುಂದ ಅವರು ತಮ್ಮ ಮುಂದಿನ ಯೋಜನೆಯನ್ನು ಕಿಕ್‌ಸ್ಟಾರ್ಟ್ ಮಾಡಲು ಸಜ್ಜಾಗುತ್ತಿದ್ದಾರೆ. ಚಿತ್ರ ಕನ್ನಡ-ತೆಲುಗು ದ್ವಿಭಾಷಾ ಚಿತ್ರವಾಗಲಿದ್ದು, ಕೌಟುಂಬಿಕ ಪ್ರತೀಕಾರದ ಕಥೆಯುಳ್ಳ ಸಿನಿಮಾವಾಗಿದೆ. ಪೂರ್ಣ ಪ್ರಮಾಣದ ನಾಯಕನಾಗಿ ತಾಂಡವ್ ರಾಮ್ ಎಂಟ್ರಿ ಕೊಡುತ್ತಿದ್ದಾರೆ.

ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ ಮುಗಿಲ್‌ಪೇಟೆ ಚಿತ್ರ ನಿರ್ದೇಶಿಸಿದ್ದ ಭರತ್ ಎಸ್ ನಾವುಂದ ಅವರು ತಮ್ಮ ಮುಂದಿನ ಯೋಜನೆಯನ್ನು ಕಿಕ್‌ಸ್ಟಾರ್ಟ್ ಮಾಡಲು ಸಜ್ಜಾಗುತ್ತಿದ್ದಾರೆ. ಚಿತ್ರ ಕನ್ನಡ-ತೆಲುಗು ದ್ವಿಭಾಷಾ ಚಿತ್ರವಾಗಲಿದ್ದು, ಕೌಟುಂಬಿಕ ಪ್ರತೀಕಾರದ ಕಥೆಯುಳ್ಳ ಸಿನಿಮಾವಾಗಿದೆ. ಪೂರ್ಣ ಪ್ರಮಾಣದ ನಾಯಕನಾಗಿ ತಾಂಡವ್ ರಾಮ್ ಎಂಟ್ರಿ ಕೊಡುತ್ತಿದ್ದಾರೆ.

ಜೋಡಿ ಹಕ್ಕಿ ಧಾರಾವಾಹಿ ಮತ್ತು ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಸಣ್ಣಪರದೆಯಲ್ಲಿ ಖ್ಯಾತಿ ಗಳಿಸಿದ್ದ ತಾಂಡವ್ ರಾಮ್, ಈ ಹಿಂದೆ ಪೋಷಕ ಪಾತ್ರಗಳಲ್ಲಿ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಆದರೆ, ನಿರ್ದೇಶಕ ಭರತ್ ಅವರೊಂದಿಗಿನ ಈ ಚಿತ್ರದಲ್ಲಿ ಅವರು ನಾಯಕನಾಗಿ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸುತ್ತಿದ್ದಾರೆ.

ಅಕ್ಟೋಬರ್ ಅಂತ್ಯದ ವೇಳೆಗೆ ಚಿತ್ರೀಕರಣವನ್ನು ಪ್ರಾರಂಭಿಸಲು ಚಿತ್ರತಂಡ ಯೋಜಿಸಿದ್ದು, ಅಧಿಕೃತ ಬಿಡುಗಡೆಗೆ ತಯಾರಿ ನಡೆಸುತ್ತಿದ್ದಾರೆ. ಚಿತ್ರದಲ್ಲಿ ಮೂವರು ನಾಯಕಿಯರು ಇರಲಿದ್ದು, ಕನಿಷ್ಠ 20 ಪ್ರಮುಖ ನಟರನ್ನು ಸಿನಿಮಾಗೆ ಕರೆತರಲು ನಿರ್ದೇಶಕರು ಉದ್ದೇಶಿಸಿದ್ದಾರೆ. 

ಎ ಕ್ಯೂಬ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಲಿರುವ ಇನ್ನೂ ಹೆಸರಿಡದ ಈ ಯೋಜನೆಗೆ ವಿ. ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಈ ಹಿಂದೆ ಕ್ಷೇತ್ರಪತಿ ಚಿತ್ರಕ್ಕೆ ಕೆಲಸ ಮಾಡಿದ್ದ ಸಾಗರ್ ಈ ಚಿತ್ರಕ್ಕೂ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್