ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ರಚಿತಾ ರಾಮ್- ಅಭಿಷೇಕ್ ಅಂಬರೀಷ್ 
ಸಿನಿಮಾ ಸುದ್ದಿ

ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ಹಿಂದಿ ಡಬ್ಬಿಂಗ್ ಹಕ್ಕು ಆಕರ್ಷಕ ಬೆಲೆಗೆ ಮಾರಾಟ

ನಿರ್ದೇಶಕ ಸೂರಿ ತಮ್ಮ ಚಿತ್ರಗಳ ಮೂಲಕ ಯಾವಾಗಲೂ ತೀವ್ರ ನಿರೀಕ್ಷೆಯನ್ನು ಹುಟ್ಟುಹಾಕುತ್ತಾರೆ. ಇದೀಗ ಅವರ ಮುಂಬರುವ ಚಲನಚಿತ್ರ ಬ್ಯಾಡ್ ಮ್ಯಾನರ್ಸ್ ಕೂಡ ಈ ಪಟ್ಟಿಗೆ ಸೇರಿದೆ. ಚಿತ್ರತಂಡ ಈ ತಿಂಗಳಿನಲ್ಲಿ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದ್ದು, ಈ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕುಗಳು ಆಕರ್ಷಕ ಬೆಲೆಗೆ ಮಾರಾಟವಾಗಿವೆ. 

ನಿರ್ದೇಶಕ ಸೂರಿ ತಮ್ಮ ಚಿತ್ರಗಳ ಮೂಲಕ ಯಾವಾಗಲೂ ತೀವ್ರ ನಿರೀಕ್ಷೆಯನ್ನು ಹುಟ್ಟುಹಾಕುತ್ತಾರೆ. ಇದೀಗ ಅವರ ಮುಂಬರುವ ಚಲನಚಿತ್ರ ಬ್ಯಾಡ್ ಮ್ಯಾನರ್ಸ್ ಕೂಡ ಈ ಪಟ್ಟಿಗೆ ಸೇರಿದೆ. ಚಿತ್ರತಂಡ ಈ ತಿಂಗಳಿನಲ್ಲಿ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದ್ದು, ಈ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕುಗಳು ಆಕರ್ಷಕ ಬೆಲೆಗೆ ಮಾರಾಟವಾಗಿವೆ. ಚಿತ್ರತಂಡ ಹಣಕಾಸಿನ ವಿವರಗಳನ್ನು ಬಹಿರಂಗಪಡಿಸದಿದ್ದರೂ, ಇದು ವಿಶೇಷವಾಗಿ ಉದಯೋನ್ಮುಖ ಪ್ರತಿಭೆ ಅಭಿಷೇಕ್‌ ಅಂಬರೀಷ್‌ಗೆ ಲಾಭದಾಯಕ ಒಪ್ಪಂದವಾಗಿದೆ ಎಂದು ಹೇಳಲಾಗುತ್ತಿದೆ. ಅಭಿಷೇಕ್ ಈ ಹಿಂದೆ 'ಅಮರ್' ಚಿತ್ರದಲ್ಲಿ ನಟಿಸಿದ್ದರು.

ಮಂಗಳವಾರವಷ್ಟೇ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಲಾಗಿದ್ದು, ನಟ ಅಭಿಷೇಕ್ ಅಂಬರೀಶ್ ಮತ್ತು ರಚಿತಾ ರಾಮ್ ಅವರು ಅಂದೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. 'ಐ ಲವ್ ಯೂ, ಮೇದಿನಿ' ಎಂಬ ರೊಮ್ಯಾಂಟಿಕ್ ಟ್ರ್ಯಾಕ್‌ಗೆ ಯೋಗರಾಜ್ ಭಟ್ ಅವರ ಸಾಹಿತ್ಯ ಮತ್ತು ಚರಣ್ ರಾಜ್ ಅವರ ಸಂಗೀತ ಸಂಯೋಜನೆ ಇದೆ. ಚರಣ್‌ರಾಜ್ ಅವರೇ ಹಾಡಿಗೆ ದನಿಯಾಗಿದ್ದಾರೆ. ಈ ಹಾಡಿಗೆ ಈಗಾಗಲೇ ಮೆಚ್ಚುಗೆ ವ್ಯಕ್ತವಾಗಿದೆ.

ಚಿತ್ರವು ಈ ಹಿಂದೆ ಸಾರಾಯಿ ಕುಡುದ್ರೆ ಮತ್ತು ಓಗ ಓಗಾ ಸೇರಿದಂತೆ ಮೂರು ಹಾಡುಗಳನ್ನು ಬಿಡುಗಡೆ ಮಾಡಿತ್ತು. ಈ ಎಲ್ಲಾ ಹಾಡುಗಳಿಗೆ ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ಅಭಿಷೇಕ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವು ನೈಜ ಘಟನೆಗಳಿಂದ ಪ್ರೇರಿತವಾಗಿದ್ದು, ಸೂರಿ ಅವರ ಸಾಮಾನ್ಯ ಶೈಲಿಯಲ್ಲಿ ತಯಾರಾಗಿದೆ. ಸ್ಟುಡಿಯೋ 18 ಬ್ಯಾನರ್ ಅಡಿಯಲ್ಲಿ ಸುಧೀರ್ ಕೆಎಂ ನಿರ್ಮಿಸಿರುವ ಈ ಚಿತ್ರದಲ್ಲಿ ಪ್ರಿಯಾಂಕಾ ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಮತ್ತು ಶೇಖರ್ ಛಾಯಾಗ್ರಹಣವನ್ನು ನಿಭಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT