ದರ್ಶನ್ ಮತ್ತು ಧ್ರುವ ಸರ್ಜಾ 
ಸಿನಿಮಾ ಸುದ್ದಿ

ಮನಸಲ್ಲೊಂದು ಹೊರಗೊಂದು ಇರುವುದು ನನಗೆ ಬರಲ್ಲ; ನನ್ನ ಕೆಲವು ಪ್ರಶ್ನೆಗಳಿಗೆ ದರ್ಶನ್ ಉತ್ತರ ನೀಡಬೇಕು: ಮೌನ ಮುರಿದ ಧ್ರುವ ಸರ್ಜಾ

ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್‌  ಹಾಗೂ ತಮ್ಮ ನಡುವೆ ಎದ್ದು ತೋರಿದ ಮನಸ್ತಾಪದ ವಿಚಾರದಲ್ಲಿ ಧ್ರುವ ಸರ್ಜಾ ತಮ್ಮ ಬರ್ತ್‌ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದಾರೆ.

ಬೆಂಗಳೂರು: ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್‌  ಹಾಗೂ ತಮ್ಮ ನಡುವೆ ಎದ್ದು ತೋರಿದ ಮನಸ್ತಾಪದ ವಿಚಾರದಲ್ಲಿ ಧ್ರುವ ಸರ್ಜಾ ತಮ್ಮ ಬರ್ತ್‌ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದಾರೆ. ದರ್ಶನ್‌ ಬಳಿ ಕೇಳಬೇಕಾದ ಪ್ರಶ್ನೆಗಳು ನನ್ನ ಬಳಿ ಇದ್ದು, ಅದನ್ನು ಅವರ ಬಳಿಯೇ ಕೇಳಬೇಕಿದೆ ಎಂದಿದ್ದಾರೆ.

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳ ನಡುವೆ ಬರ್ತ್‌ಡೇ ಆಚರಿಸಿಕೊಂಡರು. ಅವರ ಮನೆಯ ಮುಂದೆ ಸೇರಿದ ಅಭಿಮಾನಿಗಳು ನೆಚ್ಚಿನ ನಟನಿಗೆ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಧ್ರುವ ಸರ್ಜಾ, ದರ್ಶನ್‌ ಹಾಗೂ ತಮ್ಮ ನಡುವಿನ ಮನಸ್ತಾಪದ ಬಗ್ಗೆ ಮಾತನಾಡಿದರು. ದರ್ಶನ್ ಅವರು ಹಿರಿಯ ನಟ, ಸೀನಿಯರ್ ಕೂಡ. ದರ್ಶನ್ ಅವರ ಉಪಸ್ಥಿತಿ ಮತ್ತು ಅನುಪಸ್ಥಿತಿಯಲ್ಲೂ ಅದೇ ಮರ್ಯಾದೆ ಇರುತ್ತೆ. ಅದರೆ ಅವರ ಬಗ್ಗೆ ಕೇಳಲು ಕೆಲವು ಪ್ರಶ್ನೆಗಳಿವೆ. ಅವುಗಳನ್ನು ಅವರ ಬಳಿಯೇ ಕೇಳಬೇಕು ಎಂದಿದ್ದಾರೆ.

ನನಗೂ ಸ್ವಾಭಿಮಾನ ಇದೆ, ನಾನು ಅವರೊಟ್ಟಿಗೆ ಈ ವಿಚಾರವಾಗಿ ಮಾತನಾಡುತ್ತೇನೆ. ಕೆಲವರು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಇಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ಬಗ್ಗೆ ಹೇಳುವುದು ಇಷ್ಟೇ, ನನ್ನಲ್ಲಿರುವ ಕೆಲವು ಗೊಂದಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕು. ನಾಟಕೀಯವಾಗಿ ಮನಸಲ್ಲೊಂದು ಹೊರಗೊಂದು ಥರ ಇರುವುದು ನನಗೆ ಬರುವುದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT