ತಿಮ್ಮನ ಮೊಟ್ಟೆಗಳು ಸಿನಿಮಾದ ಸ್ಟಿಲ್ 
ಸಿನಿಮಾ ಸುದ್ದಿ

ಸೆನ್ಸಾರ್ ಮುಗಿಸಿದ 'ತಿಮ್ಮನ ಮೊಟ್ಟೆಗಳು'; ಪಶ್ಚಿಮ ಘಟ್ಟದ ಕಾಳಿಂಗ ಸರ್ಪಗಳು ಚಿತ್ರದ ಪ್ರಮುಖ ಆಕರ್ಷಣೆ!

ಆದರ್ಶ್ ಅಯ್ಯಂಗಾರ್ ಅವರ ಶ್ರೀಕೃಷ್ಣ ಪ್ರೊಡಕ್ಷನ್ಸ್ ನಿರ್ಮಾಣದ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ಮುಂಬರುವ ತಿಮ್ಮನ ಮೊಟ್ಟೆಗಳು ಸಿನಿಮಾ ಸೆನ್ಸಾರ್ ಮಂಡಳಿಯಿಂದ ಯು ಪ್ರಮಾಣಪತ್ರವನ್ನು ಪಡೆದುಕೊಂಡಿದೆ. 

ಆದರ್ಶ್ ಅಯ್ಯಂಗಾರ್ ಅವರ ಶ್ರೀಕೃಷ್ಣ ಪ್ರೊಡಕ್ಷನ್ಸ್ ನಿರ್ಮಾಣದ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ಮುಂಬರುವ ತಿಮ್ಮನ ಮೊಟ್ಟೆಗಳು ಸಿನಿಮಾ ಸೆನ್ಸಾರ್ ಮಂಡಳಿಯಿಂದ ಯು ಪ್ರಮಾಣಪತ್ರವನ್ನು ಪಡೆದುಕೊಂಡಿದೆ. 

ಚಿತ್ರದ ತಾರಾಗಣದಲ್ಲಿ ಶೃಂಗೇರಿಯ ಕೇಶವ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಖರ್, ಶೃಂಗೇರಿ ರಾಮಣ್ಣ, ರಘು ರಾಮನಕೊಪ್ಪ, ಪ್ರಗತಿ ಪ್ರಭು, ಮಾಸ್ಟರ್ ಹರ್ಷ, ಮತ್ತು ವಿನಯ್ ಕಣಿವೆ ಇದ್ದಾರೆ.

ಚಿತ್ರದ ಛಾಯಾಗ್ರಹಣವನ್ನು ಪ್ರವೀಣ್ ಎಸ್ ಛಾಯಾಗ್ರಹಣ ನಿರ್ವಹಿಸಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದ ಸುತ್ತಮುತ್ತಲಿನ ಸುಂದರವಾದ ತಾಣಗಳಲ್ಲಿ ಚಿತ್ರೀಕರಣ ನಡೆದಿದೆ. ಮಲೆನಾಡಿನ ಜೀವನ ಶೈಲಿ, ಪ್ರಾಕೃತಿಕ ಸೌಂದರ್ಯ ಮತ್ತು ಮಾನವೀಯ ಮೌಲ್ಯಗಳ ಚಿತ್ರಣ ತಿಮ್ಮನ ಮೊಟ್ಟೆಗಳು ಸಿನಿಮಾದಲ್ಲಿದೆ.

ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ ಕಾಳಿಂಗ ಸರ್ಪದ ಬಗೆಗಿನ ವಿಶೇಷ ಮಾಹಿತಿ ಚಿತ್ರದಲ್ಲಿದ್ದು, ಇವುಗಳ ಉಪಸ್ಥಿತಿಯು ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಚಿತ್ರತಂಡ ಬಹಿರಂಗಪಡಿಸಿದೆ.

ಸದ್ಯ, ಇತ್ತೀಚೆಗಷ್ಟೇ ಚಿತ್ರದ ಟೀಸರ್ ಬಿಡುಗಡೆಗೊಳಿಸಿರುವ ಚಿತ್ರತಂಡ, ಸದ್ಯ ಚಿತ್ರದ ಬಿಡುಗಡೆಗೆ ಅಂತಿಮ ಹಂತದ ತಯಾರಿ ನಡೆಸುವಲ್ಲಿ ಸಕ್ರಿಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್