ಶಿವಣ್ಣ 
ಸಿನಿಮಾ ಸುದ್ದಿ

'ಘೋಸ್ಟ್ ' ಗುಂಗಿನಲ್ಲಿರುವ ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಶ್ರೀನಿ!

ಘೋಸ್ಟ್ ' ಸಿನಿಮಾ ನೋಡಿ ಶಿವಣ್ಣನ ವಿಭಿನ್ನ ಅಭಿನಯದ ಗುಂಗಿನಲ್ಲಿಯೇ ಕೆಲವೊಂದು ಪ್ರಶ್ನೆಗಳಿಗೆ ಉತ್ತರ ಸಿಗದೆ ಥಿಯೇಟರ್ ನಿಂದ ಹೊರಗೆ ಬರುವ  ಪ್ರೇಕ್ಷಕರಿಗೆ ನಿರ್ದೇಶಕ ಶ್ರೀನಿ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ.  'ಘೋಸ್ಟ್ 2' ಸಿನಿಮಾ ಮಾಡುವುದಾಗಿ ಅವರು ಘೋಷಿಸಿದ್ದಾರೆ. 

''ಘೋಸ್ಟ್ ' ಸಿನಿಮಾ ನೋಡಿ ಶಿವಣ್ಣನ ವಿಭಿನ್ನ ಅಭಿನಯದ ಗುಂಗಿನಲ್ಲಿಯೇ ಕೆಲವೊಂದು ಪ್ರಶ್ನೆಗಳಿಗೆ ಉತ್ತರ ಸಿಗದೆ ಥಿಯೇಟರ್ ನಿಂದ ಹೊರಗೆ ಬರುವ  ಪ್ರೇಕ್ಷಕರಿಗೆ ನಿರ್ದೇಶಕ ಶ್ರೀನಿ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ.  'ಘೋಸ್ಟ್ 2' ಸಿನಿಮಾ ಮಾಡುವುದಾಗಿ ಅವರು ಘೋಷಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ನಿರ್ದೇಶಕ ಶ್ರೀನಿ ‘ಘೋಸ್ಟ್ 2.0’ ಬರಲಿದೆ ಎಂದಿದ್ದಾರೆ. ಮಾತ್ರವಲ್ಲದೆ, ಈಗಿನ ‘ಘೋಸ್ಟ್’ ಸಿನಿಮಾದಲ್ಲಿ ಉತ್ತರ ನೀಡದೇ ಬಿಟ್ಟಿದ್ದ ಹಲವು ಪ್ರಶ್ನೆಗಳಿಗೆ ‘ಘೋಸ್ಟ್ 2.0’ ಸಿನಿಮಾದಲ್ಲಿ ಉತ್ತರ ನೀಡುವುದಾಗಿಯೂ ಹೇಳಿದ್ದಾರೆ. ದಳವಾಯಿ ಬದುಕಿದ್ದಾನ ?, ಅಂಡರ್​ಪಾಸ್ ಒಳಗಡೆ ಕಾರು, ಬೈಕ್​ಗಳು ಹೆಂಗೆ ಬಂದವು ? ಶಿವಣ್ಣ, ಆ ವಿಗ್ರಹದ ಒಳಗಡೆ ಹೇಗೆ ಹೋದರು? ಬೋಟ್​ಗಳನ್ನು ಆಪರೇಟ್ ಮಾಡಿದ್ದು ಯಾರು? ದಳವಾಯಿ ಮಗ ಯಾರು ? ಈ ಎಲ್ಲ ಪ್ರಶ್ನೆಗಳಿಗೂ ‘ಘೋಸ್ಟ್ 2.0’ ನಲ್ಲಿ ಉತ್ತರ ಸಿಗಲಿದೆ ಎಂದಿದ್ದಾರೆ.

ಶಿವಣ್ಣ ಅಭಿಯನದ 'ಘೋಸ್ಟ್' ಪ್ರದರ್ಶನದ ಸಂಖ್ಯೆಯು ಪ್ರತಿದಿನವೂ ಏರುತ್ತಲೇ ಇರುತ್ತದೆ. ಭಾನುವಾರ ಬೆಂಗಳೂರು ನಗರದಲ್ಲಿಯೇ 250 ಪ್ರದರ್ಶನಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಘೋಸ್ಟ್’ ಸಿನಿಮಾದಲ್ಲಿ ಬಾಲಿವುಡ್ ನಟ ಅನುಪಮ್ ಖೇರ್, ಮಲಯಾಳಂ ನಟ ಜಯರಾಂ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ಕೆಜಿಎಫ್’ ಸಿನಿಮಾದ ಯಶ್​ರ ತಾಯಿ ಅರ್ಚನಾ ಜೋಯಿಸ್ ಸಹ ಇದ್ದಾರೆ. ಸಂದೇಶ್ ನಾಗರಾಜ್ ಚಿತ್ರ ನಿರ್ಮಾಣ ಮಾಡಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!